ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಕೆರೆ ಸಂರಕ್ಷಿಸಲು ಮನವಿ

Last Updated 11 ಫೆಬ್ರುವರಿ 2020, 10:10 IST
ಅಕ್ಷರ ಗಾತ್ರ

ಧಾರವಾಡ: ‘ಜಿಲ್ಲೆಯಲ್ಲಿ ಕಣ್ಮರೆಯಾಗಿರುವ ಕೆರೆಗಳನ್ನು ಸಂರಕ್ಷಿಸಬೇಕು ಹಾಗೂ ಸ್ವಚ್ಛತೆಗಾಗಿ ಕೆರೆ ಸಂರಕ್ಷಣಾ ಸಮಿತಿಯನ್ನು ರಚಿಸಬೇಕು’ ಎಂದು ಪಂಡಿತ್ ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಸದಸ್ಯರು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಪ್ರಜಾವಾಣಿ’ಯ ಮೆಟ್ರೊ ಪುರವಣಿಯಲ್ಲಿ ಪ್ರಕಟವಾದ ‘ನಮ್ಮ ಕೆರಿ ಕಥಿ’ ಸರಣಿ ಲೇಖನಗಳ ಪ್ರತಿಗಳೊಂದಿಗೆ ಮನವಿ ಸಲ್ಲಿಸಿದ ಪ್ರತಿಷ್ಠಾನದ ಸದಸ್ಯರು, ‘ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ಕೆಲಸವನ್ನು ಜಿಲ್ಲಾಡಳಿತವು ತುರ್ತಾಗಿ ಮಾಡಬೇಕು’ ಎಂದು ಒತ್ತಾಯಿಸಿದರು.

‘ಹತ್ತು ವರ್ಷಗಳಿಂದ ಪ್ರತಿಷ್ಠಾನವು ಪರಿಸರ ಸಂರಕ್ಷಣೆಯ ಜತೆಗೆ, ಮಾಲಿನ್ಯದ ಕುರಿತು ಜಾಗೃತಿ ಮೂಡಿಸುತ್ತಾ ಬಂದಿದೆ. ನೀರಿನ ಮಹತ್ವ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ’ ಎಂದರು.

ಕೆರೆ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಪಂಡಿತ್ ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಅಧ್ಯಕ್ಷ ಕೆ.ಎಚ್. ನಾಯಕ ಅವರು, ಧಾರವಾಡದ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಮಾರ್ತಾಂಡಪ್ಪ ಕತ್ತಿ ಹಾಗೂ ಎಂ.ಎಸ್.ಪರಾಸ್ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT