‘ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಹೋರಾಟದಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ರಾಜಕೀಯದಲ್ಲಿ ಕಾಲಹರಣ ಮಾಡುತ್ತಿದ್ದಾರೆ’ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ದೂರಿದರು. ಶಾಸಕ ಎಂ.ಆರ್. ಪಾಟೀಲ ಮಾತನಾಡಿ ‘ಕೇಂದ್ರ ಸರ್ಕಾರವು ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ₹6 ಸಾವಿರ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ₹4 ಸಾವಿರ ಸೇರಿದಂತೆ ಒಟ್ಟು ₹10 ಸಾವಿರ ನೀಡಲಾಗುತಿತ್ತು ಈಗಿನ ಕಾಂಗ್ರೆಸ್ ಸರ್ಕಾರವು ರಾಜ್ಯದ ಪಾಲನ್ನು ರದ್ದುಗೊಳಿಸಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿ ವಿದ್ಯಾರ್ಥಿವೇತನವನ್ನೂ ನೀಡುತ್ತಿಲ್ಲ' ಎಂದು ದೂರಿದರು.