ಹುಬ್ಬಳ್ಳಿ: ಇಲ್ಲಿನ ಅಮರಗೋಳದ ಎಪಿಎಂಸಿಯ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ನಡೆದ ಎರಡು ದಿನಗಳ ಧಾರವಾಡ ಜಿಲ್ಲಾಮಟ್ಟದ ಮಾವು ಮೇಳ ಭಾನುವಾರ ಮುಕ್ತಾಯವಾಗಿದ್ದು, ₹12 ಲಕ್ಷ ಮೌಲ್ಯದ, 5.7 ಮೆಟ್ರಿಕ್ ಟನ್ ಮಾವಿನ ಹಣ್ಣು ಮಾರಾಟವಾಯಿತು.

‘ಮಾರುಕಟ್ಟೆ ಮತ್ತು ಮೌಲ್ಯವರ್ಧನೆ’ ಶೀರ್ಷಿಕೆಯಡಿ ಕರ್ನಾಟಕ ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿ, ಕೆಸಿಸಿಐ, ತೋಟಗಾರಿಕೆ ಇಲಾಖೆ, ಕೃಷಿ ಮಾರುಕಟ್ಟೆ ಇಲಾಖೆ, ಜಿ.ಎಸ್.ಫೌಂಡೇಷನ್ ಮತ್ತು ಜಿಲ್ಲಾಡಳಿತ ಸಹಯೋಗದಲ್ಲಿ ಮಾವು ಮೇಳ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ 30 ರೈತರು ವಿವಿಧ ತಳಿಯ ಮಾವಿನ ಹಣ್ಣು ಪ್ರದರ್ಶನ ಮತ್ತು ಮಾರಾಟ ಮಾಡಿದರು.

‘ಜಿಲ್ಲೆಯಲ್ಲಿ ಮಾವಿನ ಹಣ್ಣಿಗೆ ಹೆಚ್ಚು ಬೇಡಿಕೆಯಿದ್ದು, ಮುಂದಿನ ವರ್ಷ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಪ್ರತ್ಯೇಕವಾಗಿ ಜಿಲ್ಲಾಮಟ್ಟದ ಮಾವು ಮೇಳ ನಡೆಸಲು ಉದ್ದೇಶಿಸಲಾಗಿದೆ. ಇದರಿಂದ ರೈತರು ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್., ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಸೇರಿ ಅನೇಕರು ಭೇಟಿ ನೀಡಿದರು. ಗ್ರಾಹಕರು, ರಫ್ತುದಾರರು ಸೇರಿ ಎರಡು ಸಾವಿರ ಮಂದಿ ಭೇಟಿ ನೀಡಿದರು ಎಂದು ಆಯೋಜಕರು ತಿಳಿಸಿದ್ದಾರೆ.

ಮಾವು ಬೆಳೆದ ರೈತರು, ಮಳಿಗೆದಾರರು ಹಾಗೂ ಮೇಳದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎಪಿಎಂಸಿ ಕಾರ್ಯದರ್ಶಿ ಕೆ.ಎಚ್. ಗುರುಪ್ರಸಾದ್, ರಾಜ್ಯ ಕೃಷಿ ಮಾರಾಟ ಮಂಡಳಿ ವ್ಯವಸ್ಥಾಪಕಿ ಮೀನಾಕ್ಷಿ ಗೋವನಕೊಪ್ಪ, ಕೃಷಿ ಮಾರುಕಟ್ಟೆ ತರಬೇತಿ ಕಾಲೇಜು ಪ್ರಾಚಾರ್ಯ ಆಶಿಕ್ ಅಲಿ ಡಿ.ಎಂ., ತೋಟಗಾರಿಕೆ ಇಲಾಖೆಯ ಇಮ್ತಿಯಾಜ್ ಬಂಗಾಪುರಿ, ಜಿ.ಎಸ್.ಫೌಂಡೇಷನ್ನ ಇರ್ಷಾನ್ ಸಿರಸಂಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-24-312388521

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.