ಧಾರವಾಡ: ‘ಮರಾಠ ಸಾಮ್ರಾಜ್ಯ ಯಾವುದೇ ಜಾತಿಗೆ ಸೀಮಿತವಾಗಿರಲಿಲ್ಲ. ಅದು ಶೌರ್ಯ, ಸಾಹಸ, ಮಾನವೀಯ ಮೌಲ್ಯಗಳ ಅಡಿಪಾಯದ ಮೇಲೆ ನಿರ್ಮಾಣವಾದ ಸಾಮ್ರಾಜ್ಯ’ ಎಂದು ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಹೇಳಿದರು.

ಮರಾಠಾ ವಿದ್ಯಾಪ್ರಸಾರಕ ಮಂಡಳ ವತಿಯಿಂದ ಭಾರತ ಹೈಸ್ಕೂಲ್ ಆವರಣದಲ್ಲಿ ಭಾನುವಾರ ನಡೆದ ಐಟಿಐ ಕಾಲೇಜು, ವಿದ್ಯಾರ್ಥಿ ವಸತಿ ನಿಲಯದ ಶಂಕುಸ್ಥಾಪನೆ, ನೂತನ ಆಡಳಿತ ಕಚೇರಿ, ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯ ಕಟ್ಟಡ ಮತ್ತು ನೂತನ ಬಿ.ಎಸ್.ಸಿ.ಪದವಿ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಛತ್ರಪತಿ ಶಿವಾಜಿ ಸ್ಥಾಪಿಸಿದ ಈ ಸಾಮ್ರಾಜ್ಯವು ಸರ್ವರ ಏಳಿಗೆಗೆ ಶ್ರಮಿಸಿತು. ಶಿವಾಜಿಯವರು ಹುಬ್ಬಳ್ಳಿಯನ್ನು ಆಯಕಟ್ಟಿನ ಸ್ಥಳವಾಗಿ ನಿರ್ಮಿಸಿಕೊಂಡಿದ್ದರು. ಅವರ ದೂರದೃಷ್ಟಿಯು ದೇಶಪ್ರೇಮದ ಕಿಚ್ಚನ್ನು ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಶಾಹು ಮಹಾರಾಜರು 1905ರಲ್ಲಿ ಕೊಲ್ಲಾಪುರದಲ್ಲಿ ರಾಜಾರಾಮ ಕಾಲೇಜು ಆರಂಭಿಸುವ ಮೂಲಕ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದರು’ ಎಂದರು.

‘ಮರಾಠಾ ಮಂಡಳದ ಶೈಕ್ಷಣಿಕ ಸಂಸ್ಥೆಗಳಲ್ಲಿ ಜಿಲ್ಲೆಯ ಸಹಸ್ರಾರು ವಿದ್ಯಾರ್ಥಿಗಳು ಜಾತಿ-ಮತದ ಭೇದವಿಲ್ಲದೆ ಶಿಕ್ಷಣ ಪಡೆಯುತ್ತಿದ್ದಾರೆ. ವಿದ್ಯೆ ನೀಡುವುದು ಪವಿತ್ರವಾದ ಕೆಲಸ’ ಎಂದು ಹೇಳಿದರು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ, ‘ಯಾವುದೇ ಸಮಾಜವು ಮುಖ್ಯವಾಹಿನಿಗೆ ಬರಲು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಮರಾಠ ಮಂಡಳವು ಹಲವು ದಶಕಗಳಿಂದ ಮೌಲ್ಯಾಧಾರಿತ ಶಿಕ್ಷಣದ ಮೂಲಕ ಸಾವಿರಾರು ಪ್ರತಿಭೆಗಳನ್ನು ರೂಪಿಸುವ ಕಾಯಕದಲ್ಲಿ ತೊಡಗಿದೆ. ನೂತನ ಐಟಿಐ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಪಾಲಿಕೆಯಿಂದ ₹5 ಲಕ್ಷ ಅನುದಾನ ಒದಗಿಸಲಾಗುವುದು’ ಎಂದು ತಿಳಿಸಿದರು.

ಮಂಡಳದ ಅಧ್ಯಕ್ಷ ಮನೋಹರ ಮೋರೆ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಸದಸ್ಯ ಶಂಕರ ಶೇಳಕೆ, ಮಯೂರ ಮೋರೆ, ಪ್ರಕಾಶ ಘಾಟಗೆ, ಮಂಡಳದ ಉಪಾಧ್ಯಕ್ಷ ಯಲ್ಲಪ್ಪ ಚವಾಣ್, ಮಂಡಳಿ ಕಾರ್ಯಧ್ಯಕ್ಷ ಸುನೀಲ ಮೋರೆ, ಗೌರವ ಕಾರ್ಯದರ್ಶಿ ರಾಜು ಬಿರಜೆನವರ, ಸಹ ಕಾರ್ಯದರ್ಶಿ ರಾಜು ಕಾಳೆ, ನಿರ್ದೇಶಕರಾದ ಸುಭಾಸ ಶಿಂಧೆ, ಈಶ್ವರ ಪಾಟೀಲ, ಶಿವಾಜಿ ಸೂರ್ಯವಂಶಿ, ಪುರುಷೋತ್ತಮ ಜಾಧವ, ಸುಭಾಸ ಪವಾರ, ಮಹೇಶ ಶಿಂಧೆ, ಮಲ್ಲೇಶಪ್ಪ, ಪ್ರಸಾದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-24-1456585369

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.