ಧಾರವಾಡ: 12 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ತಾಂಡಾದ ಉಮೇಶ ರತ್ನಪ್ಪ ಲಮಾಣಿ (30) ಎಂಬಾತಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 60,500 ದಂಡವನ್ನು ನಗರದ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೊಕ್ಸೊ ಕೋರ್ಟ್ ವಿಧಿಸಿದೆ.

ನ್ಯಾಯಾಧೀಶ ರಾಜಕುಮಾರ ಸಿ. ಅವರು ಆದೇಶ ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (ಪೊಕ್ಸೊ) ಶಿಕ್ಷೆ ವಿಧಿಸಿದ್ದಾರೆ. ದಂಡದ ಹಣ ₹ 60,500ಮತ್ತು ಪರಿಹಾರ ನಿಧಿಯಿಂದ ₹ 6 ಲಕ್ಷವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ಆದೇಶಿಸಿದ್ದಾರೆ.

ಏನಿದು ಪ್ರಕರಣ?: 2022 ಆಗಸ್ಟ್ 16ರಂದು ಪ್ರಕರಣ ನಡೆದಿತ್ತು. ನೆಲ್ಲಿಹರವಿ ತಾಂಡಾದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಾಲಕಿಯನ್ನು ಉಮೇಶ ಬೈಕ್ನಲ್ಲಿ ಕರೆದೊಯ್ದಿದ್ದ. ಬಮ್ಮಿಗಟ್ಟಿ ಸಮೀಪ ಬೈಕ್ ನಿಲ್ಲಿಸಿ, ಬಾಲಕಿಯನ್ನು ಹೊಲಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸ್ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ಕೋರ್ಟ್ಗೆ ಸಲ್ಲಿಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಶೈಲಾ ಅಂಗಡಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.