ಸೋಮವಾರ, ಮೇ 23, 2022
30 °C

ಧಾರವಾಡ ವಿಧಾನ ಪರಿಷತ್‌ | ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಗೆಲುವು–ಸಲೀಂ ಅಹ್ಮದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್‌ಗೆ ಗೆಲುವು

ಧಾರವಾಡ: 'ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಗೆಲುವು ಇದು. ಈ ಫಲಿತಾಂಶ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳಿಗೆ ನೀಡಿದ ಉತ್ತರ' ಎಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್‌ ಹೇಳಿದರು.

'ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಗ್ರಾಮೀಣ ಭಾಗದ ಏಳಿಗೆಯನ್ನು, ಬಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತ ಕಸಿದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಆಶ್ವಾಸನೆ ಹಾಗೂ ಅಹಂಕಾರಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ. ಬೆಲೆ ಏರಿಕೆ ಸೇರಿ ಸರ್ಕಾರದ ಜನವಿರೋಧಿ ನೀತಿಗಳಿಗೆ ಮತದಾರ ತಕ್ಕ ಪಾಠ ಕಲಿಸಿದ್ದಾರೆ. ರಾಜ್ಯದಲ್ಲಿ ಗುತ್ತಿಗೆದಾರರು ಶೇ 40ರಷ್ಟು ಕಮೀಷನ್ ಆರೋಪ ಮಾಡಿರುವುದು ದುರ್ದೈವದ ಸಂಗತಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳಬೇಕಾದ ಪ್ರಧಾನಿ ಏನು ಮಾಡಲಿಲ್ಲ' ಎಂದರು.

ಇದನ್ನೂ ಓದಿ– ಫಲಿತಾಂಶ | ಪಕ್ಷಗಳ ಬಲಾಬಲ: ಬಿಜೆಪಿ–11, ಕಾಂಗ್ರೆಸ್‌–06, ಜೆಡಿಎಸ್‌–01, ಇತರೆ–01

'ನಾನು ಜನರ ಧ್ವನಿಯಾಗಿ ಕೆಲಸ ಮಾಡುವೆ. ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚು ಶಕ್ತಿ ಕೊಡಲು ಶ್ರಮಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸೋತ ಕ್ಷೇತ್ರಗಲ್ಲಿ ನಾವು ಎಡವಿದ್ದು ಎಲ್ಲಿ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗುವುದು' ಎಂದು ಸಲೀಂ ಅಹ್ಮದ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು