ಧಾರವಾಡ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮೇ 17ರಿಂದ 19ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

17ರಂದು ಬೆಳಿಗ್ಗೆ 10.30ಕ್ಕೆ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯುವ ಮಹಿಳಾ ಅಧಿವೇಶನದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಹುಬ್ಬಳ್ಳಿ ತಾಲ್ಲೂಕಿನ ಅಯೋಧ್ಯ ಗ್ರಾಮಕ್ಕೆ, 18ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡುವರು.

11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯೋಜಿಸಿರುವ ಪೋಶ್ ಕಾಯ್ದೆ ತರಬೇತಿ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸುವರು. ಮಧ್ಯಾಹ್ನ 12 ಗಂಟೆಗೆ ವಿವಿ ಆವರಣದಲ್ಲಿರುವ ಗಾಂಧಿಭವನದಲ್ಲಿ ಪಿ.ಜಿ ವಿದ್ಯಾರ್ಥಿನಿಯರು ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸುವರು. 4 ಗಂಟೆಗೆ ಹಳೇ ಎ.ಪಿ.ಎಂ.ಸಿ ಹತ್ತಿರ ವಾಸಿಸುತ್ತಿರುವ ದುರ್ಗಮುರಗಿ, ಕೊರಗ ಮತ್ತು ಇತರೆ ಸಮುದಾಯದವರನ್ನು ಭೇಟಿ ಮಾಡುವರು. ಸಂಜೆ 6ಕ್ಕೆ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡುವರು.

19ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-24-1340535364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.