ಧಾರವಾಡ: ‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸದಂತೆ ಏ.30ರಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಠರಾವು ಮಾಡಿರುವುದನ್ನು ರದ್ದುಗೊಳಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಧಾರವಾಡ ಧ್ವನಿ ಸಂಘಟನೆ ಅಧ್ಯಕ್ಷ ಈಶ್ವರ ಶಿವಳ್ಳಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ ಠರಾವು ವಿರೋಧಿಸಿ ಶೀಘ್ರದಲ್ಲೇ ಧಾರವಾಡ ಬಂದ್ ನಡೆಸಲು ಚಿಂತನೆ ನಡೆಸಿದ್ದೇವೆ’ ಎಂದರು.

‘ಪಾಲಿಕೆಯಲ್ಲಿ ಧಾರವಾಡವನ್ನು ಕಡೆಗಣಿಸಲಾಗುತ್ತಿದೆ. ಪ್ರತ್ಯೇಕ ಪಾಲಿಕೆ ರಚಿಸಿದರೆ ಧಾರವಾಡದ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ಶಾಸಕ ಅರವಿಂದ ಬೆಲ್ಲದ ಅವರಿಗೆ ಧಾರವಾಡ ಕ್ಷೇತ್ರದ ಜನರು ರಾಜಕೀಯ ಅವಕಾಶ ಕಲ್ಪಿಸಿದ್ಧಾರೆ. ಅವರ ತಂದೆ ಚಂದ್ರಕಾಂತ ಬೆಲ್ಲದ ಅವರಿಗೂ ಅವಕಾಶ ನೀಡಿದ್ದರು. ಆದರೆ, ಅರವಿಂದ ಬೆಲ್ಲದ ಅವರು ಪ್ರತ್ಯೇಕ ಪಾಲಿಕೆ ವಿರೋಧಿಸುವ ಮೂಲಕ ಧಾರವಾಡದ ಜನರ ಋಣ ತೀರಿಸುವ ಅವಕಾಶವನ್ನು ತಿರಸ್ಕರಿಸಿದ್ದಾರೆ’ ಎಂದು ಹೇಳಿದರು.

ಕವಿತಾ ಕಬ್ಬೇರ, ಗೌರಮ್ಮ ಬಳೋಗಿ, ಪರಮೇಶ ಕಾಳೆ, ಗುರುರಾಜ ಹುಣಶಿಮರದ, ಬಸವರಾಜ ಜಾಧವ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-24-1469991489

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.