ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಧಾರವಾಡ | ನೇಮಕಾತಿಗಾಗಿ ಭುಗಿಲೆದ್ದ ಆಕ್ರೋಶ: ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ

Published : 24 ಫೆಬ್ರುವರಿ 2026, 16:55 IST
Last Updated : 24 ಫೆಬ್ರುವರಿ 2026, 16:55 IST
ADVERTISEMENT
ಫಾಲೋ ಮಾಡಿ
Comments
ಜುಬಿಲಿ ವೃತ್ತದ ಕಡೆಗೆ ನುಗ್ಗಲು ಮುಂದಾದ ಪ್ರತಿಭಟನಾಕಾರರತ್ತ ಪೊಲೀಸರು ಲಾಠಿ ಬೀಸಿದರು

ಜುಬಿಲಿ ವೃತ್ತದ ಕಡೆಗೆ ನುಗ್ಗಲು ಮುಂದಾದ ಪ್ರತಿಭಟನಾಕಾರರತ್ತ ಪೊಲೀಸರು ಲಾಠಿ ಬೀಸಿದರು

-ಚಿತ್ರ: ಬಿ.ಎಂ.ಕೇದಾರನಾಥ

ಬಿಜೆಪಿ ನಾಯಕರಿಗೆ ‘ಗೋ ಬ್ಯಾಕ್’:
ಜಯನಗರ ವೃತ್ತಕ್ಕೆ ಬಂದ ವಿಧಾನಮಂಡಲ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ, ಛಲ‌ವಾದಿ ನಾರಾಯಣ ಸ್ವಾಮಿ, ವಿಧಾನಸಭೆ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಭಾಷಣ ಮಾಡಲು ಅವಕಾಶ ನೀಡದೇ ‘ಗೋ ಬ್ಯಾಕ್‌’ ಎಂದು ಘೋಷಣೆ ಕೂಗಿದರು. 
ಒಳ ಮೀಸಲಾತಿ ಕಾರಣದಿಂದ ನೇಮಕಾತಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ನಡೆಯುತ್ತಿದೆ. ಎರಡೂವರೆ ವರ್ಷದಲ್ಲಿ40 ಸಾವಿರಕ್ಕೂ ಹೆಚ್ಚು ನೇಮಕಾತಿ ಮಾಡಲಾಗಿದೆ. ಉಳಿದ ಹುದ್ದೆಗಳನ್ನು ಪಾರದರ್ಶಕವಾಗಿ ಕಾಲಮಿತಿ ಒಳಗೆ ಭರ್ತಿ ಮಾಡಲಾಗುವುದು
ಸಿದ್ದರಾಮಯ್ಯ, ಮುಖ್ಯಮಂತ್ರಿ
ಬಿಜೆಪಿಯವರು ತಮ್ಮ ಅವಧಿಯಲ್ಲಿ ಹುದ್ದೆಗಳನ್ನು ಯಾಕೆ ಭರ್ತಿ ಮಾಡಲಿಲ್ಲ? ನಿರುದ್ಯೋಗಿ ಯುವಕರಿಗೆ ತೊಂದರೆ ಆಗಬಾರದೆಂದು ಯುವನಿಧಿ ಯೋಜನೆ ನೀಡಿದ್ದೇವೆ 
ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ
ಉದ್ಯೋಗಾಕಾಂಕ್ಷಿಗಳು ಕೋಚಿಂಗ್ ಪಡೆದು ನೇಮಕಾತಿ ಅಧಿಸೂಚನೆ ನಿರೀಕ್ಷೆಯಲ್ಲಿ ಇದ್ದಾರೆ. ನೇಮಕಾತಿ ಆಗ್ರಹದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಬೇಕಿದೆ. ನ್ಯಾಯ ಸಿಗುವವರೆಗೂ ಹೋರಾಡಬೇಕು
ಆರ್‌.ಅಶೋಕ ವಿರೋಧ ಪಕ್ಷದ ನಾಯಕ ವಿಧಾನಸಭೆ
ಅಧಿಕಾರಕ್ಕೆ ಬಂದರೆ ಮೊದಲವರ್ಷ ಒಂದು ಲಕ್ಷ ಹಾಗೂ ಎರಡು ವರ್ಷದಲ್ಲಿ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಆದರೆ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಹುದ್ದೆಗಳ ನೇಮಕಾತಿಗೆ ಕ್ರಮ ವಹಿಸಿಲ್ಲ
ಛಲವಾದಿ ನಾರಾಯಣಸ್ವಾಮಿ ವಿರೋಧ ಪಕ್ಷದ ನಾಯಕ ವಿಧಾನ ಪರಿಷತ್ತು
ಯುವಜನರ ಈ ಹೋರಾಟಕ್ಕೆ ಸಹಮತ ಇದೆ. ಪ್ರಧಾನಿ ಮೋದಿ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದಿದ್ದರು. ಕೇಂದ್ರ ಸರ್ಕಾರದ ವಿರುದ್ಧವೂ ಹೋರಾಟ ಮಾಡಬೇಕು. ಎಲ್ಲ ಸರ್ಕಾರಗಳನ್ನೂ ಪ್ರಶ್ನಿಸಬೇಕು.
ಸಂತೋಷ್‌ ಎಸ್‌.ಲಾಡ್‌ ಜಿಲ್ಲಾ ಉಸ್ತುವಾರಿ ಸಚಿವ
ಸರ್ಕಾರದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದಿದ್ದರೂ ಸಂಪುಟ ದರ್ಜೆಯ ಹುದ್ದೆಗಳು ಮಾತ್ರ ವೇಗವಾಗಿ ಭರ್ತಿಯಾಗುತ್ತಿವೆ. ಇದು ಕಾಂಗ್ರೆಸ್‌ ಆಡಳಿತದ ವೈಖರಿ
ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ
ಯುವ ಜನರು ಎರಡೂವರೆ ವರ್ಷಗಳಿಂದ ಕಣ್ಣೀರು ಹಾಕುತ್ತಿದ್ದಾರೆ. ಉದ್ಯೋಗ ಕೇಳಿದವರ ಮೇಲೆ ಕಳೆದ ಬಾರಿ ಲಾಠಿ ರುಚಿ ತೋರಿಸಿದಿರಿ. ಯುವ ಜನರ ಜೀವನದ ಜತೆ ಚೆ‌ಲ್ಲಾಟ ನಿಲ್ಲಿಸಿ
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. 50 ಸಾವಿರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದಿಸಿದೆ. ಅಧಿಸೂಚನೆ ಹೊರಡಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳುತ್ತೇ‌ವೆ
ಕಾಂತಕುಮಾರ್‌, ಅಧ್ಯಕ್ಷ, ಅಕ್ಸಾ
ನೇಮಕಾತಿಗೆ ಆಗ್ರಹಿಸಿ 6 ತಿಂಗಳಿನಿಂದ ಹೋರಾಟ
ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು, ಯುವಜನರು ಕಳೆದ ವರ್ಷ ಸೆಪ್ಟೆಂಬರ್‌ 25ರಂದೂ ಬೃಹತ್ ಪ್ರತಿಭಟನೆ ಕೈಗೊಂಡಿದ್ದರು. ‘ಅಕ್ಸಾ’ ಸಂಘಟನೆ ನೇತೃತ್ವದಲ್ಲಿ ಮತ್ತೆ ಡಿಸೆಂಬರ್ 8ರಂದು ಪ್ರತಿಭಟನೆಗೆ ಮುಂದಾಗಿದ್ದಾಗ ಪೊಲೀಸರು ಅನುಮತಿ ನೀಡಿರಲಿಲ್ಲ. ಸಂಘಟನೆಯ ಮುಖಂಡರು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಪೊಲೀಸರು ಅನುಮತಿ ನಿರಾಕರಿಸಿದರೂ ಎಐಯುಟಿಯುಸಿ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಡಿಸೆಂಬರ್ 10ರಂದು ಪ್ರತಿಭಟನೆ ನಡೆದಿತ್ತು. ಆಗ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT