ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ | ಒಳಮೀಸಲಾತಿ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಲು ಆಗ್ರಹ

Published : 7 ಆಗಸ್ಟ್ 2024, 16:24 IST
Last Updated : 7 ಆಗಸ್ಟ್ 2024, 16:24 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ‘ಕರ್ನಾಟಕ ಲೋಕಸೇವಾ ಆಯೋಗ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಆರಂಭಿಸಿರುವ ಉದ್ಯೋಗ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, ಸುಪ್ರೀಂ ಕೋರ್ಟ್‌ ತೀರ್ಪಿನಂತೆ ಒಳ ಮೀಸಲಾತಿ ಸೌಲಭ್ಯ ಕಲ್ಪಿಸಿ ಮತ್ತೆ ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು‘ ಎಂದು ಕರ್ನಾಟಕ ಮಾದಿಗ ದಂಡೋರ (ಮಾದಿಗ ಮೀಸಲಾತಿ ಸಮಿತಿ) ಪ್ರಮುಖರು ಆಗ್ರಹಿಸಿದರು. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಒಳಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಸ್ವಾಗತಿಸಿ ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿ ಆವರಣದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿ, ತಹಶೀಲ್ದಾರ್‌ ಕಚೇರಿಯ ತನಕ ಪಾದಯಾತ್ರೆ ನಡೆಸಿ ಮಾತನಾಡಿದರು. 

‘ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಂಬಂಧ ಸುಪ್ರೀ ಕೋರ್ಟ್‌ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದ್ದು, ಕೂಡಲೇ ರಾಜ್ಯ ಸರ್ಕಾರವು ಒಳಮೀಸಲಾತಿ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಕಲಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. 

ಸಮಿತಿಯ ಜಿಲ್ಲಾಧ್ಯಕ್ಷ ವೆಂಕಟೇಶ ಅನಂತುರ, ಗಂಗಾಧರ ಪೆರೂರು, ಮಹೇಶ ಬಂಡಾರಿ, ಶ್ರೀನಿವಾಸ ರೆಟ್ಟಿ, ಹನುಮಂತ ಯರಗುಂಟೆ, ರಾಮಕೃಷ್ಣ ಅನಂತಪುರ, ನಾಗವೇಣಿ ಬೆಳ್ದೋಣಿ, ರಾಜು ಪಾಮಡಿ, ಮೇಘರಾಜ ಹಿರೇಮನಿ, ಶಿವು ಬಳ್ಳಾರಿ ಹಾಗೂ ಪ್ರಮುಖರು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT