ಉಪ್ಪಿನಬೆಟಗೇರಿ: ‘ಜೀವನದಲ್ಲಿ ಯಾರಿಗೂ ಕೇಡು ಬಯಸದೆ, ಎಲ್ಲರಿಗೂ ಒಳ್ಳೆಯದನ್ನೇ ಬಯಸಬೇಕು’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಧಾರವಾಡ ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ಸಂಸ್ಥಾನ ಪಂಚಗೃಹ ಹಿರೇಮಠದ ಕರ್ತೃ ಶ್ರೀಗುರುಶಾಂತಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಧರ್ಮ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಇಹದ ಬದುಕು ಅರ್ಥಪೂರ್ಣವಾಗಿದ್ದು, ಮೋಕ್ಷ ಮಾರ್ಗದತ್ತ ಸಾಗಲು ಗುರುವಿನ ಮಾರ್ಗದರ್ಶನ ಅಗತ್ಯ. ರಾಷ್ಟ್ರ, ಧರ್ಮ-ಸಂಸ್ಕೃತಿ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು’ ಎಂದು ತಿಳಿಸಿದರು.

ಮುಖಂಡ ಮಂಜುನಾಥ ಮಕ್ಕಳಗೇರಿ ಮಾತನಾಡಿ, ಅಧ್ಯಾತ್ಮದಿಂದ ಜನವಿರೋಧಿ ಕೃತ್ಯ ಕಡಿಮೆಯಾಗಿ ಬದುಕಿನ ದಾರಿ ಸುಗಮವಾಗುತ್ತದೆ ಎಂದರು.

ಶಿರಕೋಳ ಹಿರೇಮಠದ ಗುರುಸಿದ್ಧೇಶ್ವರ ಸ್ವಾಮೀಜಿ, ಇನಾಂಹೊಂಗಲ ವಿರಕ್ತಮಠದ ಅಭಿನವ ಸಿದ್ಧಲಿಂಗ ಸ್ವಾಮೀಜಿ, ಸುಳ್ಳದ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಸ್ವಾಮೀಜಿ, ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ನಿಜನಗೌಡ ಪಾಟೀಲ ಮಾತನಾಡಿದರು. ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಸ್ವಾಮೀಜಿ, ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಶ್ರೀಕಂಠ ರಾಮನಗೌಡರ, ವೀರೇಶಕುಮಾರ ಮಳಲಿ ಹಾಗೂ ಮಲ್ಲಿಕಾರ್ಜುನ ಕೆರಕನಹಳ್ಳಿ, ಗುರುಮೂರ್ತಿ ಯರಗಂಬಳಿಮಠ, ಸೋಮಲಿಂಗಶಾಸ್ತ್ರಿ ಗುಡ್ಡದಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-24-998263645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.