ಧಾರವಾಡ: ರಾಜ್ಯ ಸರ್ಕಾರವು 56 ಸಾವಿರ ಹುದ್ದೆಗಳ ನೇಮಕಾತಿಗೆ ಶೀಘ್ರ ಅಧಿಸೂಚನೆ ಪ್ರಕಟಿಸಬೇಕು, ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಪಿ.ಸಿ.ಹೋಟಾ ಸಮಿತಿ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಜಿಲ್ಲಾ ಘಟಕದವರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಕಾರರು, ಕೂಡಲೇ ನೇಮಕಾತಿ ಪ್ರಕ್ರಿಯೆ ಚಾಲನೆ ನೀಡಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘56,432 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಆರಂಭಿಸುವುದಾಗಿ ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಘೋಷಿಸಿತ್ತು. ಆದರೆ, ಈವರೆಗೆ ಪ್ರಕ್ರಿಯೆ ಆರಂಭಿಸಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು.

ಕೆಎಎಸ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಎಲ್ಲ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಉದ್ಯೋಗಕ್ಕೆ ಅರ್ಜಿ ಸಲ್ಲಿಕೆಗೆ ಹೆಚ್ಚು ಶುಲ್ಕ ವಿಧಿಸಬಾರದು, ಅಭ್ಯರ್ಥಿಗಳು ನೇಮಕಾತಿ ಪರೀಕ್ಷೆಗೆ ತೆರಳಲು ಬಸ್, ರೈಲುಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆಯ ವಾರ್ಷಿಕ ಕ್ಯಾಲೆಂಡರ್ ಪ್ರಕಟಿಸೇಕು ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯ ಘಟಕದ ಸಹ ಸಂಚಾಲಕ ಭವಾನಿಶಂಕರ ಗೌಡ, ಜಿಲ್ಲಾ ಸಂಚಾಲಕ ವೀರೇಶ್ ನರೇಗಲ್, ಹನುಮಗೌಡ ದಾಸಿಗೌಡರ್, ಅಮೃತ್ ಜಿ ಕೊಂಡಿಕೊಪ್ಪ, ಯಲ್ಲಪ್ಪ ದೊರೆ, ಹನುಮಂತ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-1026796498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.