ಧಾರವಾಡ: ‘ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟ ಹಾಗೂ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯವಾಗಬಾರದು. ಶಾಲೆ ಹಾಗೂ ಹಾಸ್ಟೆಲ್ಗಳಿಗೆ ಎಲ್ಪಿಜಿ ಸಿಲಿಂಡರ್ಗಳನ್ನು ಸಮರ್ಪಕವಾಗಿ ಪೂರೈಸಬೇಕು’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೆಟ್ರೋಲ್ ಬಂಕ್ ಕಂಪನಿ ಮತ್ತು ಎಲ್ಪಿಜಿ ವಿತರಕ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮೇ 25ರೊಳಗೆ ಎಲ್ಲ ಶಾಲೆಗಳು ಮತ್ತು ಹಾಸ್ಟೆಲ್ಗಳಿಗೆ ಸಿಲಿಂಡರ್ಗಳನ್ನು ವಿತರಿಸಬೇಕು. ಪೆಟ್ರೋಲ್ ಬಂಕ್ಗಳಲ್ಲಿ ಲಭ್ಯವಿರುವ ಇಂಧನ ಪ್ರಮಾಣ ಹಾಗೂ ಪ್ರಸ್ತುತ ದರದ ವಿವರವನ್ನು ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದರು. ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಶಾಲಾ ಶಿಕ್ಷಣ ಇಲಾಖೆ ಅಕ್ಷರ ದಾಸೋಹ ಯೋಜನೆ ಶಿಕ್ಷಣಾಧಿಕಾರಿ ರೂಪಾ ಬಿ. ಪೂರಮಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-24-1998696158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.