ಧಾರವಾಡ: ‘ರಕ್ತವನ್ನು ಕೃತಕವಾಗಿ ಉತ್ಪಾದನೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ದೇಹದಲ್ಲಿ ಉತ್ಪಾದನೆ ಆಗುವ ರಕ್ತವನ್ನು ಮತ್ತೊಬ್ಬರ ಜೀವ ಉಳಿಸಲು ದಾನ ಮಾಡಬೇಕು’ ಎಸ್ಡಿಎಂ ವೈದ್ಯಕೀಯ ವಿಶ್ವವಿದ್ಯಾಲಯದ ಸ್ತ್ರೀರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುನೀಲ ಕುಮಾರ ಕೆ.ಎಸ್ ಹೇಳಿದರು.

ನಗರದ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ಇನ್ಸಿಗ್ನಿಯಾ ರಾಷ್ಟ್ರಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ರಕ್ತದಾನ ಸಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎಸ್ಡಿಎಂ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. 200ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.

ಡಾ.ಜತೇಶ್ ಕುಮಾರ್ ಗೋಯೆಲ್, ಜಿಲ್ಲಾಆಸ್ಪತ್ರೆಯ ಅಭಿಷೇಕ್ ಗದಗ, ಎಸ್ಡಿಎಂಇ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ ಕುಮಾರ್, ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಪ್ರೊ.ಆರ್.ಎಲ್ ಚಕ್ರಸಾಲಿ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಆನಂದ್ ವೈದ್ಯ, ಡಾ.ರಾಜಶೇಖರಪ್ಪ, ಪ್ರೊ ರಶ್ಮಿ ಪಾಟೀಲ್, ಪ್ರೊ ಪುಷ್ಪಲತಾ, ಪ್ರೊ ತನ್ವೀರ್ ಅಹ್ಮದ್, ಪ್ರೊ ಗವಿಸಿದ್ದೇಶ ಮಜ್ಜಗಿ, ಪ್ರೊ ಸಮೀರ ಚಿಟ್ನಿಸ್, ಪ್ರೊ ಗೋವಿಂದ ನೆಗಳೂರ, ರಾಮಚಂದ್ರನಾಯಕ ಯಾದವಾಡ, ಪ್ರೊ ಕಿರಣ ರಾಥೋಡ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-24-1598166459

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.