ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡದಿರಲು ಗುರುವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿರುವುದನ್ನು ಖಂಡಿಸಿ ಗುರುವಾರ ನಗರದಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದು ಕಾಂಗ್ರೆಸ್ ಮುಖಂಡರು, ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆಯವರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು.

ಜುಬಿಲಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮೇಯರ್ ಜ್ಯೋತಿ ಪಾಟೀಲ, ಪಾಲಿಕೆ ಸಭಾ ನಾಯಕ ಈರೇಶ ಅಂಚಟಗೇರಿ ವಿರುದ್ಧ ಘೋಷಣೆ ಕೂಗಿದರು. ಅವರು ಭಿತ್ತಿಫಲಕಗಳನ್ನು ಹರಿದರು.

‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಸಿಲು ಈ ಹಿಂದೆ ಸರ್ವಾನುಮತದಿಂದ ನಿರ್ಣಯಿಸಲಾಗಿತ್ತು. ಸರ್ಕಾರವು ಅದನ್ನು ಒಪ್ಪಿಪ್ರಸ್ತಾವವನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿದೆ. ಈ ಹಂತದಲ್ಲಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸದಿರಲು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿ ಬಿಜೆಪಿಯವರು ದ್ವಂದ್ವ ನಿಲುವು ಅನುಸರಿಸುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.

‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಪ್ರಸ್ತಾವವನ್ನು ಸರ್ಕಾರವು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ ಅವರು ಪ್ರಸ್ತಾವವನ್ನು ತಡೆಹಿಡಿಯುವಂತೆ ಮಾಡಿದ್ದಾರೆ’ ಎಂದು ಆಪಾದಿಸಿದರು.

‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವುದಾಗಿ ರಾಜ್ಯ ಸರ್ಕಾರವು ಘೋಷಿಸಿದಾಗ ಬಿಜೆಪಿಯ ಮುಖಂಡರು ಸ್ವಾಗತಿಸಿದ್ದರು. ಅವರ ಪ್ರಯತ್ನದಿಂದಲೇ ಸರ್ಕಾರ ಘೋಷಣೆ ಮಾಡಿದೆ ಎಂದು ನಗರದಲ್ಲಿ ಬ್ಯಾನರ್ಗಳನ್ನು ಅಳವಡಿಸಿದ್ದರು. ಪ್ರತ್ಯೇಕ ಪಾಲಿಕೆ ರಚಿಸಬಾರದು ಎಂದು ನಿರ್ಣಯಿಸಿರುವುದಾಗಿ ಈಗ ಬಿಜೆಪಿಯವರು ಬ್ಯಾನರ್ಗಳನ್ನು ನಗರದಲ್ಲಿ ಅಳವಡಿಸಬೇಕು. ಅವರ ದ್ವಂದ್ವ ನಡೆಯನ್ನು ಜನರಿಗೆ ತಿಳಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

15 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆಯದೊಯ್ದು, ಸ್ವಲ್ಪಹೊತ್ತಿನಲ್ಲಿ ಬಿಡುಗಡೆಗೊಳಿಸಲಾಯಿತು ಎಂದು ಎಸಿಪಿ ಪ್ರಶಾಂತ ಸಿದ್ದನಗೌಡರ ‘ಪ್ರಜಾವಾಣಿ’ಗೆ ತಿಳಿಸಿದರು.

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆ ಅಧ್ಯಕ್ಷ ವೆಂಕಟೇಶ ಮಾಚಕನೂರ, ಪ್ರಧಾನ ಕಾರ್ಯದರ್ಶಿ ರವಿ ಮಾಳಿಗೇರ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಅಧ್ಯಕ್ಷ ಮನೋಜ ಪಾಟೀಲ, ಈಶ್ವರ ಶಿವಳ್ಳಿ, ಕವಿತಾ ಕಬ್ಬೇರ, ಪರಮೇಶ ಕಾಳೆ, ವೀರಣ್ಣ ಶೆಟ್ಟರ, ವಸಂತ ಅರ್ಕಾಚಾರ್, ರಾಜಶೇಖರ ಕಮತಿ, ತುಳಜಪ್ಪ ಪ್ರತಿಭಟನೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.