ಧಾರವಾಡ: ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಪ್ರಸ್ತಾವವನ್ನು ರಾಜ್ಯಪಾಲರು ಅನುಮೋದಿಸಬೇಕು ಎಂದು ಆಗ್ರಹಿಸಿ ಪ್ರತ್ಯೇಕ ಪಾಲಿಕೆ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಹಾಗೂ ಪಕ್ಷಾತೀತವಾಗಿ ವಿವಿಧ ಸಂಘಟನೆಯವರು ಶುಕ್ರವಾರ ಅನಿರ್ದಿಷ್ಟಾವಧಿ ಸತ್ಯಪ್ರತಿಪಾದನಾ ಸತ್ಯಾಗ್ರಹ ಆರಂಭಿಸಿದರು.

ಪಾಲಿಕೆ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಕಾರರು ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕು’ ಎಂದು ಘೋಷಣೆ ಕೂಗಿದರು.

ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಬಿ.ಡಿ. ಹಿರೇಮಠ ಮಾತನಾಡಿ, ‘ಪ್ರತ್ಯೇಕ ಪಾಲಿಕೆ ಪ್ರಸ್ತಾವಕ್ಕೆ ರಾಜ್ಯಪಾಲರು ಐದು ದಿನಗಳಲ್ಲಿ ಅನುಮೋದನೆ ನೀಡಬೇಕು. ಇಲ್ಲದಿದ್ದರೆ ಆಮರಣ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಮುಖಂಡ ಮುಖಂಡ ವೆಂಕಟೇಶ ಮಾಚಕನೂರ ಮಾತನಾಡಿ, ‘ಅವಳಿ ನಗರಗಳು ಒಂದೇ ಪಾಲಿಕೆಯ ವ್ಯಾಪ್ತಿಯಲ್ಲಿದ್ದರೂ ಆಡಳಿತಾತ್ಮಕ ವಿಕೇಂದ್ರೀಕರಣದ ಕೊರತೆಯಿಂದಾಗಿ ನಿರೀಕ್ಷಿತಮಟ್ಟದಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಧಾರವಾಡದ ಸರ್ವಾಂಗೀಣ ಪ್ರಗತಿ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರತ್ಯೇಕ ಪಾಲಿಕೆ ಅನಿವಾರ್ಯವಾಗಿದೆ’ ಎಂದರು.

ಮುಖಂಡರಾದ ಗುರುರಾಜ ಹುಣಸಿಮರದ, ಈಶ್ವರ ಶಿವಳ್ಳಿ, ವಿಠ್ಠಲ ಕಮ್ಮಾರ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ ಬಲೋಗಿ, ನಾಗರಾಜ ಗೌರಿ, ಮಾಜಿ ಮೇಯರ್ ದಾನಪ್ಪ ಕಬ್ಬೆರ, ಪಾಲಿಕೆ ಸದಸ್ಯ ಶಂಭು ಸಾಲಮನಿ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ ಬಲೋಗಿ, ನಾಗರಾಜ ಗೌರಿ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-24-827569611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.