ಧಾರವಾಡ: ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ರಾಜ್ಯಪಾಲರು ಹಾಕಿರುವ ನಿಬಂಧನೆಗಳನ್ನು ಪೂರೈಸಿ ಅಂತಿಮ ಅಧಿಸೂಚನೆ ಪ್ರಕಟಿಸಲು ಕ್ರಮ ವಹಿಸಬೇಕು’ ಎಂದು ಧಾರವಾಡದ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಶಾಸಕ ಪ್ರಸಾದ್ ಅಬ್ಬಯ್ಯ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ಸಹಿತ ಇತರ ಮುಖಂಡರು ಬೆಂಗಳೂರಿನಲ್ಲಿ ಶಿವಕುಮಾರ್ ಅವರೊಂದಿಗೆ ಪ್ರತ್ಯೇಕ ಪಾಲಿಕೆ ರಚನೆ ಬಗ್ಗೆ ಚರ್ಚಿಸಿದರು. ತ್ವರಿತವಾಗಿ ಪರಿಶೀಲನೆ ನಡೆಸಿ ಕ್ರಮವಹಿಸುವುದಾಗಿ ಎಂದು ಶಿವಕುಮಾರ್ ಭರವಸೆ ನೀಡಿದರು.

ಮುಖಂಡರು ನಿಯೋಗದವರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರೊಂದಿಗೂ ಸಮಾಲೋಚನೆ ನಡೆಸಿದರು. ಮುಖಂಡರಾದ ದಾನಪ್ಪ ಕಬ್ಬೇರ, ನಾಗರಾಜ ಗೌರಿ, ಅರವಿಂದ ಏಗನಗೌಡರ, ರಾಜಶೇಖರ ಕಮತಿ, ಚನ್ನಬಸಪ್ಪ ಮಟ್ಟಿ, ಪ್ರಕಾಶ ಘಾಟಗೆ, ತುಳಸಪ್ಪ ಪೂಜಾರ, ಸಂತೋಷ್ ನೀರಲಕಟ್ಟಿ, ವೀರೇಶ್ ಶೆಟ್ಟರ್, ಕಿಶೋರ್ ಬಡಿಗೇರ, ಚಿದಾನಂದ ಚಂದರಗಿ ಇದ್ದರು ಎಂದು ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-547720909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.