ಧಾರವಾಡ: ‘ಹು–ಧಾ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡ ಪ್ರತ್ಯೇಕ ಪಾಲಿಕೆ ರಚಿಸಿದರೆ ಕೇಂದ್ರದ 16ನೇ ಹಣಕಾಸು ಆಯೋಗದಡಿ ಹೆಚ್ಚು ಅನುದಾನ ಲಭಿಸಲ್ಲ ಎಂಬ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ ಅವರ ಪ್ರತಿಪಾದನೆ ಸತ್ಯಕ್ಕೆ ದೂರವಾಗಿದೆ’ ಎಂದು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆ ಅಧ್ಯಕ್ಷ ವೆಂಕಟೇಶ ಮಾಚನೂರ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದ 16ನೇ ಹಣಕಾಸು ಆಯೋಗದ ಮಾರ್ಗಸೂಚಿಗಳನ್ನು ಪರಿಶೀಲಿಸಿದ್ದೇವೆ. ದೇಶದ ಎಲ್ಲ ಮಹಾನಗರ ಪಾಲಿಕೆಗಳು, ನಗರ ಸಭೆಗಳು, ಪುರಸಭೆಗಳ ಸೇವೆ ಮತ್ತು ಮೂಲಸೌಕರ್ಯ ಸುಧಾರಣೆಗಾಗಿ ಐದು ವರ್ಷಗಳಲ್ಲಿ ₹3.56 ಲಕ್ಷ ಕೋಟಿ ಅನುದಾನವನ್ನು 4,824 ನಗರಗಳಿಗೆ ವೆಚ್ಚ ಮಾಡಲು ಯೋಜಿಸಲಾಗಿದೆ. ಕರ್ನಾಟಕದ ಪಾಲು ₹ 18,483 ಕೋಟಿ ಇದೆ’ ಎಂದರು.

‘2011ರ ಜನಗಣತಿ ಪ್ರಕಾರ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ 22 ನಗರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ₹56,100 ಕೋಟಿ ವಿಶೇಷ ಅನುದಾನವನ್ನು ಆಯೋಗ ನಿಗದಿಪಡಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಒಂದು ನಗರವೂ ಇಲ್ಲ. ಹೀಗಾಗಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ವಿಭಜನೆ ಆಗದಿದ್ದರೆ ಹೆಚ್ಚು ಅನುದಾನ ಸಿಗುತ್ತದೆ ಎಂಬ ಪ್ರತಿಪಾದನೆಯಲ್ಲಿ ಹುರುಳಿಲ್ಲ’ ಎಂದು ವಿವರಿಸಿದರು.

‘ಧಾರವಾಡ ನಗರದಲ್ಲಿ ಪರಿಣಾಮಕಾರಿ ಆಡಳಿತ ವ್ಯವಸ್ಥೆ, ದೈನಂದಿನ ಆಡಳಿತದ ಅನುಕೂಲಕ್ಕಾಗಿ ಹಾಗೂ ಹುಬ್ಬಳ್ಳಿ ಕೇಂದ್ರಿತ ಆಡಳಿತ ವ್ಯವಸ್ಥೆಯಿಂದಾಗಿ ಧಾರವಾಡಕ್ಕೆ ನ್ಯಾಯೋಚಿತ ಸೌಕರ್ಯ ಸಿಗದ ಕಾರಣಕ್ಕೆ ಪ್ರತ್ಯೇಕ ಪಾಲಿಕೆ ಅಗತ್ಯವಿದೆ. ಎರಡೂ ಮಹಾನಗರಗಳ ತ್ವರಿತ ಅಭಿವೃದ್ಧಿ ಮತ್ತು ಆಡಳಿತದ ದೃಷ್ಟಿಯಿಂದ ಪ್ರತ್ಯೇಕ ಪಾಲಿಕೆ ಆಗಬೇಕಿದೆ’ ಎಂದು ತಿಳಿಸಿದರು.

‘ಪಾಲಿಕೆ ವಿಭಜನೆಯಾದರೂ ಜನಸಂಖ್ಯೆ ಆಧರಿಸಿ ಅನುದಾನ ಲಭ್ಯವಾಗುತ್ತದೆ. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಿದರೆ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಲಭ್ಯವಾಗುತ್ತದೆ. ರಾಜ್ಯಪಾಲರ ಬಳಿ ತಡೆ ಹಿಡಿದಿರುವ ಪ್ರತ್ಯೇಕ ಪಾಲಿಕೆ ಕಡತಕ್ಕೆ ಅನುಮೋದನೆ ದೊರಕಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು.

ರವಿಕುಮಾರ ಮಾಳಿಗೇರ, ವಿಠ್ಠಲ ಜಿ. ಕಮ್ಮಾರ, ಶಂಕರ ಸಿ. ನೀರಾವರಿ, ವಸಂತ ಅರ್ಕಾಚಾರ್, ಭಿಮಸೇನ ಕಾಗಿ, ವೀರಣ್ಣ ಶೆಟ್ಟರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-24-691236077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.