ಧಾರವಾಡ: ‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಮಸೂದೆಯನ್ನು ಅನುಮೋದಿಸಲು ರಾಜ್ಯಪಾಲರಿಗೆ ಸೂಚನೆ ನೀಡುವಂತೆ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದೇವೆ’ ಎಂದು ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಅಧ್ಯಕ್ಷ ಮನೋಜ ಪಾಟೀಲ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರವು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ವಿಧೇಯಕವನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿ 10 ತಿಂಗಳಾಗಿದೆ. ಈವರೆಗೆ ರಾಜ್ಯಪಾಲರು ಅದನ್ನು ಅನುಮೋದಿಸಿಯೂ ಇಲ್ಲ, ವಾಪಸ್ ಕೂಡ ಕಳುಹಿಸಿಲ್ಲ. ರಾಷ್ಟ್ರಪತಿ, ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು. ವಿಧೇಯಕ್ಕೆ ಅನುಮೋದನೆ ಕೊಡಿಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಪ್ರತ್ಯೇಕ ಪಾಲಿಕೆ ರಚನೆಗೆ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು, ರಾಜ್ಯಪಾಲರ ಅನುಮೋದನೆಗೆ ಕಳುಹಿಸಿದೆ. ಪ್ರತ್ಯೇಕ ಪಾಲಿಕೆ ರಚನೆಗೆ ಆಗ ಒಪ್ಪಿದ್ದ ಸಂಸದ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಈಗ, ಅವಳಿನಗರಕ್ಕೆ ಒಂದೇ ಪಾಲಿಕೆ ಇದ್ದರೆ ಹೆಚ್ಚು ಅನುದಾನ ಬರುತ್ತದೆ ಎಂದು ವರಸೆ ಬದಲಿಸಿದ್ದಾರೆ’ ಎಂದರು.

‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಡ ಎಂದು ಪಾಲಿಕೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಸಿದ್ಧತೆ ನಡೆದಿದೆ. ಈ ನಿಲುವು ವಿರೋಧಿಸುತ್ತೇವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯ ಘಟಕದ ಅಧ್ಯಕ್ಷರಿಗೂ ಪತ್ರ ಬರೆದಿದ್ದೇವೆ’ ಎಂದರು.

ವೇದಿಕೆ ಉಪಾಧ್ಯಕ್ಷ ಪ್ರೊ. ಷಡಕ್ಷರಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಬಿ. ಕಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-24-2112364064

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.