ಧಾರವಾಡ: ‘ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಹುಬ್ಬಳ್ಳಿ-ಧಾರವಾಡ ಒಂದಾಗಿದ್ದರೆ ಹೆಚ್ಚಿನ ಅನುದಾನ ಸಿಗುತ್ತದೆ ಎಂಬ ಕಾರಣಕ್ಕೆ ತಾತ್ಕಾಲಿಕವಾಗಿ ಪ್ರಕ್ರಿಯೆ ತಡೆಹಿಡಿಯಲಾಗಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನ ಕಡಿಮೆ ಬಂದರೂ ಪ್ರತ್ಯೇಕ ಪಾಲಿಕೆಯೇ ಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಯರ್ ಜ್ಯೋತಿ ಪಾಟೀಲ್ ಅವರು ಶುಕ್ರವಾರ ಪ್ರತ್ಯೇಕ ಪಾಲಿಕೆಯ ನಿರ್ಣಯ ಪಾಸ್ ಮಾಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ಜನರಿಗೆ ಸರಿಯಾಗಿ ಸ್ಪಂದಿಸಿಲ್ಲ. ಸಾರ್ವಜನಿಕರು 136 ಸೀಟುಗಳನ್ನು ನೀಡಿದ್ದರೂ ಅಭಿವೃದ್ಧಿ ಮಾಡುವಲ್ಲಿ ವಿಫಲವಾಗಿದೆ. ನೂತನ ಮುಖ್ಯಮಂತ್ರಿ ಆಗುವವರು ಅವರು ಈ ಸಮಸ್ಯೆಗಳನ್ನು ಸರಿಪಡಿಸಿಕೊಂಡು, ತಮಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಹುಬ್ಬಳ್ಳಿ–ಧಾರವಾಡದಲ್ಲಿ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಇಲಾಖೆಯು ಸಮಾಜ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿದೆ. ಸಮಾಜ ವಿರೋಧಿಗಳು ರೈತರಿಗೆ ಗನ್ ತೋರಿಸಿ ಜಮೀನುಗಳನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಶೂಟೌಟ್ ಪ್ರಕರಣದ ವಿಡಿಯೋದಲ್ಲಿ ಆರೋಪಿ ಸ್ಪಷ್ಟವಾಗಿ ಕಾಣಿಸುತ್ತಿದ್ದರೂ, ಎಫ್ಐಆರ್ನಲ್ಲಿ ಆತನ ಹೆಸರು ಕೈಬಿಟ್ಟು ಬೇರೆಯವರ ಹೆಸರು ಸೇರಿಸಲಾಗಿದೆ. ಇಲಾಖೆಯು ಉದ್ದೇಶಪೂರ್ವಕವಾಗಿ ತಪ್ಪು ಮಾಡುತ್ತಿದ್ದು, ಇದರ ನೈಜ ಮಾಹಿತಿಯನ್ನು ಪೊಲೀಸರೇ ಸಾರ್ವಜನಿಕರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-48859747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.