ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪ್ರತ್ಯೇಕ ಪಾಲಿಕೆ ಹೋರಾಟ ವೇದಿಕೆಯವರು ಪಾಲಿಕೆ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ 14 ನೇ ದಿನ ಪೂರೈಸಿತು.

ಹೂಗಾರ ಸಮಾಜದವರು ಹಾಗೂ ವಾರ್ಡ್ 11ರ ಮುಖಂಡರು ಹಾಗೂ ಕಾರ್ಯಕರ್ತರು ಹೋರಾಟಕ್ಕೆ ಬೆಂಬಲಿಸಿ ಹೋರಾಟಗಾರಿಗೆ ಬೆಂಬಲ ಪತ್ರ ನೀಡಿದರು.

‘ಪ್ರತ್ಯೇಕ ಪಾಲಿಕೆ ಬೇಕೇ ಬೇಕು’, ‘ಎಚ್ಡಿಎಂಸಿ ಸಾಕು ಡಿಎಂಸಿ ಬೇಕು’ ಎಂದು ಘೋಷಣೆ ಕೂಗಿದರು.

ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ, ನೀಲವ್ವ ಅರವಳದ,ಲಕ್ಷ್ಮಿ ಹಿಂಡಸಗೇರಿ, ಕರೆಪ್ಪ ಸುಣಗಾರ, ಶಂಕರ ಹೂಗಾರ ಅವರು ಬೆಳಿಗ್ಗೆಯಿಂದ ಸಂಜೆವರೆಗೆ ಉಪವಾಸ ಮಾಡಿದರು. ಹಿರಿಯ ವಕೀಲ ಬಿ.ಡಿ.ಹಿರೇಮಠ, ಹೋರಾಟಗಾರ ವೆಂಕಟೇಶ ಮಾಚಕನೂರ, ದಾನಪ್ಪ ಕಬ್ಬೇರ, ಅರವಿಂದ ಏಗನಗೌಡರ, ವಸಂತ ಅರ್ಕಾಚಾರಿ, ಪಾಲಿಕೆ ಸದಸ್ಯ ರಾಜಶೇಖರ ಕಮತಿ, ನಾಗರಾಜ ಗೌರಿ, ಪ್ರಕಾಶ ಘಾಟಗೆ ಶಂಕರ ಹೂಗಾರ, ನಾಗರಾಜ ಹೂಗಾರ, ಸುರೇಶ ಪೂಜಾರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-24-473904333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.