ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡಬೇಕು ಎಂದು ಆಗ್ರಹಿಸಿ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆಯವರು ಪಾಲಿಕೆ ಕಚೇರಿ ಎದುರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಬುಧವಾರ 20ನೇ ದಿನ ಪೂರೈಸಿತು.

ಜೆಎಸ್ಎಸ್ ಶಿಕ್ಷಣ ಸಂಸ್ಥೆಯವರು ಪ್ರತ್ಯೇಕ ಪಾಲಿಕೆ ಬೆಂಬಲ ಸೂಚಿಸಿ ಹಿರಿಯ ವಕೀಲ ಬಿ.ಡಿ.ಹಿರೇಮಠ ಅವರಿಗೆ ಬೆಂಬಲ ಪತ್ರ ನೀಡಿದರು. ಪ್ರತ್ಯೇಕ ಪಾಲಿಕೆ ಬೇಕೇ ಬೇಕು ಎಂದು ಘೋಷಣೆ ಕೂಗಿದರು.

ಜೆಎಸ್ಎಸ್ ಕಾರ್ಯದರ್ಶಿ ಅಜಿತ ಪ್ರಸಾದ ಮಾತನಾಡಿ, ಪ್ರತ್ಯೇಕ ಪಾಲಿಕೆಗಾಗಿ ಬಹುದಿನಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರ ಕೂಡಲೇ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದರು.

ಜೆಎಸ್ಎಸ್ ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಮಹಾವೀರ ಉಪಾಧ್ಯೆ, ಗುರುರಾಜ ಹುಣಸಿಮರದ, ಸುರೇಶ ಬೆದರೆ, ಶಂಕರ ಶೇಳಕೆ, ವಿಜಯಾನಂದ ಶಟ್ಟಿ, ಮೋಹನ ರಾಮದುರ್ಗ, ಶಿವಾನಂದ ಕವಳಿ, ಸಂತೋಷ ತಿಗಡಿ, ಸಂಕಲ್ಪ ಕಲ್ಯಾಣಶೆಟ್ಟರ, ವಿಠ್ಠಲ ಕಮ್ಮಾರ, ಪ್ರಮೀಳಾ ಜಕ್ಕಣ್ಣವರ, ಕದಳಿ ವೇದಿಕೆಯ ಮೇಘಾ ಹುಕ್ಕೇರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-24-1585047870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.