ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಪ್ರಸ್ತಾವಕ್ಕೆ ರಾಜ್ಯಪಾಲರು ಅನುಮೋದನೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಅಭಿಮಾನಿ ಬಳಗದವರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಕಡಪಾ ಮೈದಾನದಲ್ಲಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಡೊಳ್ಳು ಕುಣಿತ, ಜಗ್ಗಲಿಗೆ ಸಹಿತ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿದ್ದವು. ‘ಪ್ರತ್ಯೇಕ ಪಾಲಿಕೆ ಬೇಕೇ ಬೇಕು’, ‘ಎಚ್ಡಿಎಂಸಿ ಸಾಕು ಡಿಎಂಸಿ ಬೇಕು’ ಭಿತ್ತಿಫಲಕಗಳನ್ನು ಹಿಡಿದು ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ಸಾಗಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ ವಿರುದ್ಧ ಘೋಷಣೆ ಕೂಗಿದರು.

ಮಹಾರಾಣಾ ಪ್ರತಾಪ ವೃತ್ತ, ಆಝಾದ್ ಉದ್ಯಾನ, ಜುಬಿಲಿ ವೃತ್ತ, ಕೋರ್ಟ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡರು.

ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಮಾತನಾಡಿ, ‘ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟದಲ್ಲಿ ಬಿಜೆಪಿ ನಾಯಕರು ದ್ವಂದ್ವ ನಿಲುವು ಅನುಸರಿಸುತ್ತಿದ್ದಾರೆ. ರಾಜ್ಯಪಾಲರು ಅವರ ಕೈಗೊಂಬೆಯಂತೆ ವರ್ತಿಸಬಾರದು, ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕು’ ಎಂದು ಕೋರಿದರು.

ಕಾಂಗ್ರೆಸ್ ಮಹಾನಗರ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡ ನಾಗರಾಜ ಗುರಿಕಾರ, ಪಾಲಿಕೆ ಸದಸ್ಯ ರಾಜಶೇಖರ ಕಮತಿ, ಆನಂದ ಮುಶಣ್ಣವರ, ತವನಪ್ಪ ಅಷ್ಟಗಿ, ಶಂಕರ ಹೊಸಮನಿ, ವಸಂತ ಅರ್ಕಾಚಾರ, ಅರವಿಂದ ಏಗನಗೌಡರ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-24-1480366146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.