ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಮಾಡಲೇಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಮಂಗಳವಾರ ಕಲ್ಯಾಣನಗರದಲ್ಲಿ ಪ್ರತಿಭಟನೆ ನಡೆಸಿದರು.

ಮೇಯರ್ ಜ್ಯೋತಿ ಪಾಟೀಲ ಅವರ ಮನೆ ಮುಂದೆ ಸಮಾವೇಶಗೊಂಡ ಪ್ರತಿಭಟನಕಾರರು, ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕೇ ಬೇಕು’ ಘೋಷಣೆ ಕೂಗಿದರು. ‘ಧಾರವಾಡಕ್ಕೆ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ’ ಮೊದಲಾದ ಭಿತ್ತಿಫಲಕಗಳನ್ನು ಪ್ರದರ್ಶಿಸಿದರು.

‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗೆ ಆಗ್ರಹಿಸಿ ಈ ಹಿಂದೆ ನಡೆದ ಹೋರಾಟಗಳಲ್ಲಿ ಮೇಯರ್ ಜ್ಯೋತಿ ಪಾಟೀಲ ಅವರು ಪಾಲ್ಗೊಂಡಿದ್ದರು. ಆದರೆ, ಈಗ ವ್ಯತಿರಿಕ್ತ ನಿಲುವು ವ್ಯಕ್ತಪಡಿಸಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನಾಕಾರರು ಮೇಯರ್ ಜ್ಯೋತಿ ಪಾಟೀಲ ಅವರನ್ನು ಭೇಟಿಯಾಗಿ, ಬೇಡಿಕೆಗೆ ಸ್ಪಂದಿಸಬೇಕು ಎಂದು ಕೋರಿದರು.

ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೊರೆ, ಕವಿತಾ ಕಬ್ಬೇರ, ರವಿ ಮಾಳಿಗೇರ, ಶಂಭು ಸಾಲಮನಿ, ಮೆಹಬೂಬ್ ಪಠಾಣ್, ವೀರಣ್ಣ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-24-43501671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.