ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿದಿದೆ. ಆದರೆ, ಭಾನುವಾರದಿಂದ ಅಹೋರಾತ್ರಿ ಧರಣಿ ಕೈಬಿಡಲಾಗಿದೆ.

ವೇದಿಕೆ ವತಿಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಭಾನುವಾರ 17ನೇ ದಿನ ಪೂರೈಸಿತು. ಹೋರಾಟಗಾರರು ಸಂಜೆವರೆಗೂ ವೇದಿಕೆಯಲ್ಲಿ ಇದ್ದರು. ಸರದಿಯಂತೆ ಕೆಲವರು ಬೆಳಿಗ್ಗೆಯಿಂದ ಸಂಜೆವರೆಗೆ ಉಪವಾಸ ಕೈಗೊಂಡರು. ಸುಧೀರ ಮುಧೋಳ, ಷರೀಫ ಅಮ್ಮಿನಭಾವಿ, ಲಕ್ಷ್ಮಣ ದೊಡ್ಡಮನಿ, ಮಂಜುನಾಥ ಸುತಗಟ್ಟಿ ಇತರರು ಉಪವಾಸ ಮಾಡಿದರು. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕೇ ಬೇಕು ಎಂದು ಆಗ್ರಹಿಸಿದರು.

ವಿಜಯ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆಗಳವರು ಬೆಂಬಲ ಸೂಚಿಸಿ ಹೋರಾಟದಲ್ಲಿ ಪಾಲ್ಗೊಂಡರು. ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾಲಿಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹೋರಾಟಗಾರ ಬಿ.ಡಿ.ಹಿರೇಮಠ ಅವರು ಸಂಜೆ ವೇದಿಕೆಗೆ ಬಂದು ಇತರರು ಹೋರಾಟಗಾರರೊಂದಿಗೆ ಚರ್ಚಿಸಿದರು. ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಲೇಬೇಕು. ಗುರಿ ತಲುಪುವವರೆಗೆ ಹೋರಾಟ ಮುಂದುವರಿಯಲಿದೆ. ಜೂನ್ 9ರೊಳಗೆ ಅಂತಿಮ ಅಧಿಸೂಚನೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಹೋರಾಟಗಾರರು ಬೆಂಗಳೂರಿಗೆ ತೆರಳಿ ಸಂಬಂಧಪಟ್ಟವರಿಗೆ ಒತ್ತಡ ಹೇರಬೇಕು’ ಎಂದು ಬಿ.ಡಿ.ಹಿರೇಮಠ ಹೇಳಿದರು.

‘ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಹೋರಾಟ ನಡೆಯಲಿದೆ. ಅಹೋರಾತ್ರಿ ಧರಣಿಯನ್ನು ಕೈಬಿಡಲಾಗಿದೆ’ ಎಂದು ತಿಳಿಸಿದರು.

ಹೋರಾಟಗಾರ ವೆಂಕಟೇಶ ಮಾಚಕನೂರ ಮಾತನಾಡಿ, ‘ಸರದಿ ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ. ಬೆಳಿಗ್ಗೆ 10ರಿಂದ 6 ಗಂಟೆವರೆಗೆ ಎಲ್ಲರೂ ಹೋರಾಟ ವೇದಿಕೆಯಲ್ಲಿ ಭಾಗವಹಿಸಬೇಕು’ ಎಂದರು.

ಶಿವಶಂಕರ ಹಂಪಣ್ಣವರ, ಶಂಕರ ನೀರಾವರಿ, ಲಕ್ಷ್ಮಣ ಬಕ್ಕಾಯಿ, ಕವಿತಾ ಕಬ್ಬೇರ, ರಾಜಶೇಖರ ಕಮತಿ, ಅರವಿಂದ ಏಗನಗೌಡರ, ವೀರಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-674214942

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.