ಧಾರವಾಡ: ‘ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ರಾಜ್ಯಪಾಲರು ಷರತ್ತುಬದ್ಧ ಅನುಮೋದನೆ ನೀಡಿದ್ದಾರೆ. ರಾಜ್ಯ ಸರ್ಕಾರವು ಷರತ್ತುಗಳನ್ನು ಪೂರೈಸಿ ಜೂನ್ 9 ರೊಳಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ಕ್ರಮ ವಹಿಸದಿದ್ದರೆ, ಹೋರಾಟ ತೀವ್ರಗೊಳಿಸುತ್ತೇವೆ’ ಎಂದು ವಕೀಲ ಬಿ.ಡಿ. ಹಿರೇಮಠ ಹೇಳಿದರು.

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರ ವೇದಿಕೆ ವತಿಯಿಂದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಬುಧವಾರ ನಡೆದ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸುವವರೆಗೂ ಅನಿರ್ದಿಷ್ಟಾವಧಿ ಧರಣಿ ಮುಂದುವರೆಯಲಿದೆ. ಪಾಲಿಕೆಯ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು (ಧಾರವಾಡದವರು) ಪಕ್ಷಾತೀತವಾಗಿ ನಿರಂತರವಾಗಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು’ ಎಂದರು.

‘ಪ್ರತ್ಯೇಕ ಪಾಲಿಕೆಗಾಗಿ ಮೇ 29 ರಂದು ಬೈಕ್ ರ್ಯಾಲಿ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ರ್ಯಾಲಿಯಲ್ಲಿ ಪಾಲ್ಗೊಂಡು ಶಕ್ತಿ ಪ್ರದರ್ಶಿಸಬಹುದು’ ಎಂದು ಹೇಳಿದರು.

ಧಾರವಾಡ ಹೋಟೆಲ್ ಒಡೆಯರ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಶೆಟ್ಟಿ ಮಾತನಾಡಿ, ‘ರಾಜ್ಯಪಾಲರು ಪ್ರಸ್ತಾವಕ್ಕೆ ಷರತ್ತುಬದ್ಧವಾಗಿ ಅನುಮೋದನೆ ನೀಡಿದ್ದಾರೆ. ಧಾರವಾಡ ಬಂದ್ ಮಾಡಿದರೆ ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಅಂತಿಮ ಅಧಿಸೂಚನೆ ಪ್ರಕಟಣೆಗೆ ರಾಜ್ಯ ಸರ್ಕಾರಕ್ಕೆ ಕೆಲವು ದಿನ ಗಡುವು ನೀಡುವುದು ಒಳಿತು’ ಎಂದರು.

‘ಪ್ರತ್ಯೇಕ ಪಾಲಿಕೆ ಅಂತಿಮ ಅಧಿಸೂಚನೆ ಹೊರಡಿಸಲು ಯಾವುದೇ ತೊಂದರೆ ಇಲ್ಲ. ರಾಜ್ಯ ಸರ್ಕಾರ ಕ್ರಮ ವಹಿಸಬೇಕು’ ಎಂದು ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ತಿಳಿಸಿದರು.

ಅನಿರ್ದಿಷ್ಟಾವಧಿ ಧರಣಿ ಬುಧವಾರಕ್ಕೆ 13 ದಿನ ಪೂರೈಸಿತು. ನಾಮದೇವ ಸಂಪಿ ಸಮಾಜ, ಕಟ್ಟಡ ಕಾರ್ಮಿಕರ ಸಂಘಟನೆ, ಬ್ರಾಹ್ಮಣ ಸಮಾಜ, ಜಯ ಕರ್ನಾಟಕ ಸಂಘಟನೆಯವರು ಹೋರಾಟಕ್ಕೆ ಬೆಂಬಲ ನೀಡಿದರು.

ಮುಖಂಡರಾದ ಮನೋಜ ಪಾಟೀಲ, ದಾನಪ್ಪ ಕಬ್ಬೇರ,ಗುರುರಾಜ ಹುಣಸಿಮರದ, ವಿಠ್ಠಲ ಕಮ್ಮಾರ, ಕಾಳಪ್ಪ ಬಡಿಗೇರ, ಅರವಿಂದ ಏಗನಗೌಡರ, ಪಾಲಿಕೆ ಸದಸ್ಯ ಶಂಕರ ಶಳೇಕೆ, ವಿಜಯಾನಂದ ಶೆಟ್ಟಿ, ಕವಿತಾ ಕಬ್ಬೇರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-24-771338747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.