ಧಾರವಾಡ: ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಬೇಕು ಎಂದು ಒತ್ತಾಯಿಸಿ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಹಾಗೂ ಪಕ್ಷಾತೀತವಾಗಿ ವಿವಿಧ ಸಂಘಟನೆಯವರು ಪಾಲಿಕೆ ಕಚೇರಿ ಎದುರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಸತ್ಯಪ್ರತಿಪಾದನಾ ಸತ್ಯಾಗ್ರಹ ಧರಣಿ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿತು.

ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಬಿ.ಡಿ.ಹಿರೇಮಠ ಮಾತನಾಡಿ, ‘ಧಾರವಾಡದ ಸಮಗ್ರ ಅಭಿವೃದ್ಧಿ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರತ್ಯೇಕ ಪಾಲಿಕೆ ರಚನೆ ಅತ್ಯಗತ್ಯ. ರಾಜ್ಯ ಸರ್ಕಾರವು ಪ್ರತ್ಯೇಕ ಪಾಲಿಕೆ ರಚನೆಯ ಪ್ರಸ್ತಾವವನ್ನು ಅಂಗೀಕರಿಸಿ ಲೋಕಭವನಕ್ಕೆ ಕಳುಹಿಸಿದ್ದರೂ, ರಾಜ್ಯಪಾಲರು ಅನುಮೋದನೆ ನೀಡದೆ ವಿಳಂಬ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ’ ಎಂದು ಹೇಳಿದರು.

‘ರಾಜ್ಯಪಾಲರು ಸಂವಿಧಾನ ಬದ್ಧವಾಗಿ ಕಾರ್ಯ ನಿರ್ವಹಿಸಬೇಕು. ರಾಜಕೀಯ ನಾಯಕರ ಒತ್ತಡಕ್ಕೆ ಮಣಿಯಬಾರದು. ಪ್ರತ್ಯೇಕ ಮಹಾನಗರ ಪಾಲಿಕೆ ಪ್ರಸ್ತಾವಕ್ಕೆ ಆದಷ್ಟು ಬೇಗ ಅನುಮೋದನೆ ನೀಡದಿದ್ದರೆ ಮೇ 20ರ ನಂತರ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಬಸವ ಶಾಂತಿ ಮಿಷನ್ ಅಧ್ಯಕ್ಷ ಮಹದೇವ ಹೊರಟ್ಟಿ, ಹೋರಾಟಗಾರಾದ ವೆಂಕಟೇಶ ಮಾಚಕನೂರ, ಮನೋಜ ಪಾಟೀಲ, ಅರವಿಂದ ಏಗನಗೌಡರ, ಗುರುರಾಜ ಹುಣಸಿಮರದ, ವೈಶಾಲಿ ಕುಲಕರ್ಣಿ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೌರಮ್ಮ ಬಲೋಗಿ, ನಾಗರಾಜ ಗೌರಿ, ಈಶ್ವರ ಶಿವಳ್ಳಿ, ವಿಠ್ಠಲ ಕಮ್ಮಾರ, ವಸಂತ ಅರ್ಕಾಚಾರ, ಶಿವಶಂಕರ ಹಪ್ಪನವರ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-24-435618525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.