ಧಾರವಾಡ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ರಾಜ್ಯಪಾಲರು ಅನುಮೋದನೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಪಾಲಿಕೆ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರ ಐದನೇ ದಿನಕ್ಕೆ ಕಾಲಿಟ್ಟಿತು. ಪ್ರತಿಭಟನಾಕಾರರು ಪಾಲಿಕೆ ಕಟ್ಟಡದಲ್ಲಿನ ಮೇಯರ್, ಆಯುಕ್ತರ ಕಚೇರಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಕಚೇರಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪಾಲಿಕೆ ಕಟ್ಟಡದ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು ‘ಎಚ್ಡಿಎಂಸಿ ಸಾಕು ಡಿಎಂಸಿ ಬೇಕು’ ‘ಪ್ರತ್ಯೇಕ ಪಾಲಿಕೆ ಬೇಕೇ ಬೇಕು’ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪಗೌಡ ಪಾಟೀಲ ಮಾತನಾಡಿ, ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಸಾರ್ವಜನಿಕರ ಬೇಡಿಕೆಯಾಗಿದೆ. ರಾಜ್ಯಪಾಲರು ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು. ವಿಳಂಬ ಮಾಡಬಾರದು’ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ ಮಾತನಾಡಿ, ‘ಹೋರಾಟ ಈಗ ಅಂತಿಮ ಹಂತಕ್ಕೆ ತಲುಪಿದೆ. ರಾಜ್ಯಪಾಲರಿಂದ ಸಕಾರಾತ್ಮಕ ನಿರ್ಧಾರ ಬಂದರೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುತ್ತೇವೆ. ಒಂದು ವೇಳೆ ನಿರ್ಧಾರ ವ್ಯತಿರಿಕ್ತವಾಗಿ ಬಂದರೆ ಧಾರವಾಡ ಬಂದ್ ಮಾಡಲು ಮುಂದಾಗುತ್ತೇವೆ’ ಎಂದು ಎಚ್ಚರಿಸಿದರು.

ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಯವರು ಪ್ರತ್ಯೇಕ ಪಾಲಿಕೆ ಬೆಂಬಲಿಸಿ ಹೋರಾಟಗಾರಿಗೆ ಬೆಂಬಲ ಪತ್ರ ನೀಡಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಭೀಮಪ್ಪ ನೇಮಿಕಲ್, ಕರವೇ ಪ್ರವೀಣ ಶೆಟ್ಟಿ ಬಣದ ಬೆಳಗಾವಿ ವಿಭಾಗೀಯ ಅಧ್ಯಕ್ಷ ಪಾಪು ಧಾರೆ, ಎಸ್. ಸಿ. ನೀರಾವರಿ, ನಿಂಗಣ್ಣ ಕರಿಕಟ್ಟಿ, ಪಾಲಿಕೆ ಸದಸ್ಯರಾದ ರಾಜಶೇಖರ್ ಕಮತಿ, ಪ್ರಕಾಶ್ ಘಾಟಗೆ, ಕವಿತಾ ಕಬ್ಬೆರ, ದೀಪಾ ನೀರಲಕಟ್ಟಿ, ಮನೋಜ ಪಾಟೀಲ, ಲಕ್ಷ್ಮಣ ಬಕ್ಕಾಯಿ, ಶಿವಶರಣ ಕಲಬಶೆಟ್ಟರ, ನಾಗರಾಜ ಪಟ್ಟಣಶೆಟ್ಟಿ, ಮಡಿವಾಳಪ್ಪ ಶಿರಿಯಣ್ಣವರ, ಮಂಜುನಾಥ ಮುಗ್ಗನ್ನವರ, ನಿಂಗಣ್ಣ ಕರಿಕಟ್ಟಿ, ಬಸವಂತ ತೋಟದ, ಸಂಜಯ ಲಕಮನಹಳ್ಳಿ, ಪ್ರಕಾಶ ಜಕಾತಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-1980826760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.