ಧಾರವಾಡ: ‘ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಆ.21, 22 ಮತ್ತು 23ರಂದು ವಿಶೇಷ ಲೋಕ ಅದಾಲತ್ ನಡೆಯಲಿದೆ. ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳನ್ನು ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಇದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ಯಾಂಕಿಂಗ್, ವಿಮೆ, ಮೋಟಾರು ವಾಹನ ಅಪಘಾತ ಪರಿಹಾರ, ವರ್ಗಾವಣೆ ಅರ್ಜಿ, ಬಾಡಿಗೆ, ಆಸ್ತಿ ತೆರಿಗೆ, ಕೌಟುಂಬಿಕ ವಿವಾದ ಮೊದಲಾದ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು. ಪಕ್ಷಗಾರರು ಖುದ್ದು ಅಥವಾ ವಿಡಿಯೊ ಕಾನ್ಪರೆನ್ಸ್ ಮೂಲಕ ಅದಾಲತ್ನಲ್ಲಿ ಭಾಗವಹಿಸಲು ಅವಕಾಶ ಇದೆ’ ಎಂದು ತಿಳಿಸಿದರು.

‘ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಪಕ್ಷಗಾರರು ಈಗಾಗಲೇ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ ನೀಡಲಾಗುವುದು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-24-535057259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.