ಧಾರವಾಡ: ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎಂದು ಜನತಾ ದಳ (ಸಂಯುಕ್ತ) ಜಿಲ್ಲಾ ಘಟಕದವರು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಆದಿತ್ಯ ಬಡ ಕುಟುಂಬದ ವಿದ್ಯಾರ್ಥಿ. ಆತ್ಮಹತ್ಯೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಶಿಕ್ಷೆ ವಿಧಿಸಬೇಕು. ಆದಿತ್ಯ ಅವರ ಕುಟುಂಬಕ್ಕೆ ಸರ್ಕಾರ ₹1 ಕೋಟಿ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗೆ ಪೊಲೀಸರು ಕಿರುಕುಳ ನೀಡಿದ್ದರು ಎಂಬ ಆರೋಪ ಇದೆ. ಪ್ರಕರಣ ಸಂಬಂಧ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಶ್ರೀಶೈಲಗೌಡ ಕಮತರ, ಫಿರೋಜ್ ಖಾನ್ ಹವಾಲ್ದಾರ್, ಜಾವೇದ್ ಬೆಳಗಾಂಕರ್, ಶೇಖರ್ ಹೈಬತ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-24-2111264198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.