ಧಾರವಾಡ: ನಗರದ ಕರ್ನಾಟಕ ವಿಜ್ಞಾನ ಕಾಲೇಜಿನ ಅರ್ಹ ಶಿಕ್ಷಕರಿಗೆ ಬಡ್ತಿಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಿ, ಅವರಿಗೆ ಆದೇಶ ಪತ್ರ ನೀಡಬೇಕು ಎಂಬುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳ ಶಿಕ್ಷಕರ ಸಂಘದವರು (ಕೆಯುಸಿಸಿಟಿಎ) ಈಚೆಗೆ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ತೋಳಿಗೆ ಕಪ್ಪುಪಟ್ಟಿ ಧರಿಸಿ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ‘ಸಿಎಎಸ್ ನಂಬರ್ ಕೆಯು/ ಬಿಒಎ/ ಸಿಎಎಸ್/ 2025/ 1561 ದಿನಾಂಕ: 4.12.2025ಕ್ಕೆ ಸಂಬಂಧಪಟ್ಟಂತೆ ಅರ್ಹ ಶಿಕ್ಷಕರಿಗೆ ಬಡ್ತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಕರ್ನಾಟಕ ವಿಶ್ವವಿದ್ಯಾಲಯದ ಐದು ಘಟಕ ಮಹಾವಿದ್ಯಾಲಯಗಳಿಗೆ ಕಾಯಂ ಪ್ರಾಚಾರ್ಯರು, ಉಪ ಪ್ರಾಚಾರ್ಯರನ್ನು ನೇಮಕಾತಿ ಮಾಡಬೇಕು’ ಎಂದು ಆಗ್ರಹಿಸಿದರು.

‘ಕರ್ನಾಟಕ ವಿಜ್ಞಾನ ಮತ್ತು ಕಲಾ ಮಹಾವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಪಿ.ಡಿ ಖಾತೆಗಳ ವೆಚ್ಚಗಳ ಕುರಿತು ವಿಚಾರಣೆಗೆ ನೇಮಿಸಿರುವ ಸಮಿತಿಯು ತ್ವರಿತವಾಗಿ ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.

‘ಕೃತಿ ಚೌರ್ಯ ಪ್ರಕರಣ–2ರ ಕುರಿತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಾನುಸಾರ 2026 ಮಾರ್ಚ್ 31ರಂದು ವರದಿ ಸಲ್ಲಿಕೆಯಾಗಿದೆ. ಆದರೆ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಆಡಳಿತಾಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟಕಾಕಾರರು ಒಟ್ಟು 18 ಬೇಡಿಕೆಗಳ ಪಟ್ಟಿಯನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದರು. ಸಂಘದ ಅಧ್ಯಕ್ಷ ಕೆ.ಎಸ್.ಕಟಗಿ, ಜಂಟಿ ಕಾರ್ಯದರ್ಶಿ ಎಚ್.ಡಿ.ನೀಲಗುಂದ ಪ್ರತಿಭಟನೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.