ಗುಡುಗು ಸಹಿತ ಮಳೆ: ಸಂಚಾರಕ್ಕೆ ಸಂಕಷ್ಟ

ಧಾರವಾಡ: ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾನುವಾರ ಮಳೆ ಸುರಿಯಿತು.

ಸಂಜೆ 4.30ರ ವೇಳೆಗೆ ಶುರುವಾಗಿ ಸುಮಾರು ಒಂದು ತಾಸು ಧಾರಾಕಾರವಾಗಿ ಮಳೆ ಸುರಿಯಿತು. ಗುಡುಗು ಮಿಂಚಿನ ಆರ್ಭಟ ಇತ್ತು.

ನವಲೂರು, ಕೆಎಂಎಫ್, ಎನ್ಟಿಟಿಎಫ್ ಮುಂಭಾಗದ ರಸ್ತೆ ಹಾಗೂ ಬಿಆರ್ಟಿಎಸ್ ಮಾರ್ಗದಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು. ಕೋರ್ಟ್ ವೃತ್ತ, ಸುಭಾಷ ರಸ್ತೆ, ಅಕ್ಕಿಪೇಟೆ, ಮಾರುಕಟ್ಟೆಯಲ್ಲಿ ರಸ್ತೆಗಳಲ್ಲಿ ನೀರು ನಿಂತಿತ್ತು. ಜನರು, ವಾಹನ ಓಡಾಟಕ್ಕೆ ತೊಂದರೆಯಾಯಿತು. ಕೆಲವಡೆ ಚರಂಡಿ ತುಂಬಿ ನೀರು ರಸ್ತೆಯಲ್ಲಿ ಹರಿಯಿತು. ಗಾಳಿಯ ಆರ್ಭಟಕ್ಕೆ ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಜನರು ಕೆಲ ಹೊತ್ತು ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-24-436072552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.