ಧಾರವಾಡ: ಲಾರಿ– ಟ್ರ್ಯಾಕ್ಟರ್ ನಡುವಿನ ಅಪಘಾತದಲ್ಲಿ ವ್ಯಕ್ತಿಯ ಕಾರಣರಾಗಿದ್ದ ಲಾರಿ ಚಾಲಕ ಪರಮೇಶ್ವರ ಹೊರಕೇರಿ ಎಂಬುವರಿಗೆ ಇಲ್ಲಿನ 2ನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶಿಸಿದೆ.

ನ್ಯಾಯಾಧೀಶ ಮೋಹಿತ್ ಬಿ.ಎಂ. ಅವರು ಪ್ರಕರಣದ ವಿಚಾರಣೆ ನಡೆಸಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ₹1 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಅಭಿಯೋಜಕ ಅಕ್ಷಯ ವಾಲಿ ಅವರು ವಾದ ಮಂಡಿಸಿದ್ದರು.

ಏನಿದು ಪ್ರಕರಣ?: 2015 ಏಪ್ರಿಲ್ 3 ರಂದು ಧಾರವಾಡ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪರಮೇಶ್ವರ ಹೊರಕೇರಿ ಹುಬ್ಬಳ್ಳಿ ಕಡೆಯಿಂದ ಲಾರಿಯನ್ನು ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಟ್ರ್ಯಾಕ್ಟರ್ಗೆ ಗುದ್ದಿಸಿದ್ದ. ಈ ವೇಳೆ ಟ್ರ್ಯಾಕ್ಟರ್ನಲ್ಲಿದ್ದ ಬಸವರಾಜ ತಿಪ್ಪಣ್ಣ ಕಟಗಿ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-24-1433013714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.