ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವ ಪ್ರಸ್ತಾವಕ್ಕೆ ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಅನುಮೋದನೆ ನೀಡಿದೆ.

ನಗರದ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ಮೇಯರ್ ರಾಮಪ್ಪ ಬಡಿಗೇರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸದಸ್ಯರೆಲ್ಲರೂ ಒಮ್ಮತದಿಂದ ನಿರ್ಣಯಕ್ಕೆ ಬೆಂಬಲ ಸೂಚಿಸಿದರು.

ಸದಸ್ಯ ಶಿವು ಹಿರೇಮಠ ಅವರು, ಪ್ರತ್ಯೇಕ ಪಾಲಿಕೆ ಬೇಡಿಕೆಗೆ ಅನುಮೋದನೆ ನೀಡುವಂತೆ ವಿಷಯ ಮಂಡಿಸಿದರು. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಸದಸ್ಯರು ಬೆಂಬಲ ಸೂಚಿಸಿದರು. ಮೇಯರ್ ರಾಮಪ್ಪ ಬಡಿಗೇರ ಮಾತನಾಡಿ, ‘ಸರ್ಕಾರ ಬೇಗ ನಿರ್ಣಯ ತೆಗೆದುಕೊಳ್ಳಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.