ಬೆಂಗಳೂರು: ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ನಿರುದ್ಯೋಗಿ ಯುವಕರನ್ನು ಬಂಧಿಸಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಪಕ್ಷದ ವತಿಯಿಂದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಎಚ್ಚರಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಿರುದ್ಯೋಗಿ ಯುವಜನರು ಬೆಂಗಳೂರು ಸೇರಿ ವಿವಿಧೆಡೆ ಹೋರಾಟ ಮಾಡಿದ್ದಾರೆ. ಅವರನ್ನು ಬಂಧಿಸುವ ಕಾರ್ಯ ನಡೆದಿದೆ’ ಎಂದು ಹೇಳಿದರು.

‘ನಿರುದ್ಯೋಗಿ ಯುವ ಜನರನ್ನು ಮಾತುಕತೆಗೆ ಕರೆದು ಹುದ್ದೆಗಳ ಭರ್ತಿ ಮಾಡಬೇಕು. 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಅದಕ್ಕೆ ಚಾಲನೆ ನೀಡಿಲ್ಲ. 2.84 ಲಕ್ಷ ಹುದ್ದೆ ಖಾಲಿ ಇವೆ. ಆದರೆ, ಸರ್ಕಾರ ಖಜಾನೆ ಖಾಲಿ ಮಾಡಿಕೊಂಡು ಕುಂಟು ನೆಪ ಹೇಳುತ್ತಿದೆ’ ಎಂದು ಅವರು ದೂರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-51-1242837990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.