ಧಾರವಾಡ: ‘ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ವತಿಯಿಂದ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ100 ಸಮಿತಿಗಳನ್ನು ರಚಿಸಲಾಗಿದೆ. ಸದಸ್ಯರ ಕಾರ್ಯಾಗಾರ ಆಯೋಜಿಸಲಾ ಗಿದೆ’ ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಪರಾಂಡೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ‘ವಿಶ್ವ ಹಿಂದೂ ಪರಿಷತ್ ವತಿಯಿಂದ ರಕ್ತದಾನ ಶಿಬಿರ, ಸ್ವಉದ್ಯೋಗ ತರಬೇತಿ ಮೊದಲಾದವನ್ನು ಆಯೋಜಿಸಲಾಗುತ್ತಿದೆ. ವಿವಿಧ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದರು.

‘ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಶೋಷಣೆ ಪ್ರಕರಣಗಳು ಆತಂಕಕಾರಿಯಾಗಿವೆ. ಗುರಿಪಡಿಸಿದ ಶೋಷಣೆ, ಬಲವಂತದ ಮತಾಂತರ, ದುರ್ಬಲ ವರ್ಗಗಳನ್ನು ತಪ್ಪು ದಾರಿಗೆಳೆಯುವ ಸಂಘಟಿತ ಪ್ರಯತ್ನಗಳು ಮೊದಲಾದವು ಅಶಾಂತಿ ಉಂಟು ಮಾಡುತ್ತವೆ. ಇಂಥ ಚಟುವಟಿಕೆಗಳವಿರುದ್ಧ ಸಮಾಜ ಎಚ್ಚರಿಕೆಯಿಂದಇರಬೇಕು’ ಎಂದು ಹೇಳಿದರು.

‘ಲವ್ ಜಿಹಾದ್’ ಪ್ರಕರಣಗಳು ಆತಂಕಕಾರಿ. ಇಂಥ ಘಟನೆಗಳು ನಡೆದಾಗ ಪೊಲೀಸರು ಎಫ್ಐಆರ್ ದಾಖಲಿಸಲು ವಿಳಂಬ ಮಾಡಬಾರದು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ಗೋರಕ್ಷಾ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು’ ಎಂದು ತಿಳಿಸಿದರು.

‘ದೇಶದಲ್ಲಿ ಮಾದಕ ಪದಾರ್ಥಗಳಿಗೆ ಕಡಿವಾಣ ಹಾಕಬೇಕಿದೆ. ಶಾಲೆ, ಕಾಲೇಜು ವಿದ್ಯಾರ್ಥಿಗಳು ಮಾದಕ ಪದಾರ್ಥಗಳಗೀಳು ಬೆಳೆಸಿಕೊಂಡಿದ್ದಾರೆ. ‘ನಶಾ ಮುಕ್ತಭಾರತ’ ನಿರ್ಮಾಣ ಮಾಡುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯ ಇದೆ. ವಿಶ್ವ ಹಿಂದೂ ಪರಿಷತ್ ವತಿಯಿಂದಲೂ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜನೆ ಮಾಡುತ್ತಿದ್ದೇವೆ’ ಎಂದರು.

ಲಿಂಗರಾಜ ಅಪ್ಪ, ಶಿವಕುಮಾರ ಬೋಳಶೆಟ್ಟಿ, ಮಹೇಶ ಪಾಟೀಲ, ಎಸ್.ಆರ್.ರಾಮನಗೌಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-24-2113367442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.