ಧಾರವಾಡ: ಶಾಸಕ ವಿನಯ ಕುಲಕರ್ಣಿ ಅವರ ವಿರುದ್ಧ ಕೆಲವರು ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

ಮುಖಂಡರಾದ, ಈಶ್ವರ ಶಿವಳ್ಳಿ,. ಪರಮೇಶ್ವರ ಕಾಳೆ, ಬಸೂ ಜಾಧವ್, ಭೀಮಪ್ಪ ಇತರರು ಬುಧವಾರ ರಾತ್ರಿ ಜುಬಿಲಿ ವೃತ್ತದಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದರು. ಕೆಲವರು ಷಡ್ಯಂತ್ರ ಮಾಡಿ ವಿನಯ ಕುಲಕರ್ಣಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ವಾಹನದಲ್ಲಿ ಉಪನಗರ ಠಾಣೆಗೆ ಕರೆದೊಯ್ದರು.

‘ಜುಬಿಲಿ ವೃತ್ತದಲಿ ರಸ್ತೆಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದರು. ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಸ್ವಲ್ಪ ಹೊತ್ತಿನ ನಂತರ ಬಿಡುಗಡೆಗೊಳಿಲಾಯಿತು’ ಎಂದು ಎಸಿಪಿ ಪ್ರಶಾಂತ ಸಿದ್ದನಗೌಡ್ರ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-24-1386837170

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.