ಧಾರವಾಡ: ‘ನೀರು ಅಮೃತಕ್ಕೆ ಸಮಾನ, ನೀರಿನ ಮಹತ್ವವನ್ನು ಎಲ್ಲರೂ ತಿಳಿದುಕೊಳ್ಳಬೇಕು’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಇಲ್ಲಿನ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ(ವಾಲ್ಮಿ) ಸಭಾಭವನದಲ್ಲಿ ಈಚೆಗೆ ನಡೆದ ವಿಶ್ವ ಜಲ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘4 ಟಿ.ಎಂ.ಸಿ ನೀರಿಗಾಗಿ ಮಹದಾಯಿ-ಕಳಸಾ ಬಂಡೂರು ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಿಸಿದ್ದೇವೆ. ಕೃಷಿಗಾಗಿ ನೀರು ಹರಿಸುವಾಗ ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ನೀರು ಹಳ್ಳಗಳಿಗೆ ಹರಿಯದಂತೆ ನೋಡಿಕೊಳ್ಳಬೇಕು’ ಎಂದರು.

‘ರೈತರು ಕಾಲಕ್ಕೆ ತಕ್ಕಂತೆ ಕೃಷಿಯಲ್ಲಿ ಹೊಸ ತಂತ್ರಜ್ಞಾನ ಮತ್ತು ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು. ಹೊಲವನ್ನು ಮಾರಾಟ ಮಾಡಬಾರದು, ಸಾಂಪ್ರದಾಯಿಕ ಬೆಳೆ ಜೊತೆಗೆ ಲಾಭದಾಯಕ ಇತರೆ ಬೆಳೆಗಳನ್ನು ಬೆಳೆಯಬೇಕು’ ಎಂದು ಸಲಹೆ ನೀಡಿದರು.

ವಾಲ್ಮಿ ನಿರ್ದೇಶಕ ಗಿರೀಶ ಮರಡ್ಡಿ ಮಾತನಾಡಿ, ‘ಪಶು ಆಧಾರಿತ, ಸಸ್ಯ ಆಧಾರಿತ, ಮೌಲ್ಯ ವರ್ಧಿತ ಒಕ್ಕಲುತನ ಮಾಡುವುದರ ಮೂಲಕ ಕೃಷಿಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು’ ಎಂದರು.

ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು. ವಾಲ್ಮಿ ಪ್ರಾಧ್ಯಾಪಕ ಸುಧೀಂದ್ರ ಕೆ.ಎಸ್., ಸುರೇಶ ದಿಕ್ಷೀತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-24-1246402774

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.