ಧಾರವಾಡ: ‘ನೀರನ್ನು ಮಿತವಾಗಿ ಬಳಸಬೇಕು, ಸದ್ಬಳಕೆ ಮಾಡಿಕೊಳ್ಳಬೇಕು, ಜಲ ಮಾಲಿನ್ಯ ತಡೆಗಟ್ಟಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಫ್.ಎಚ್.ಜಕ್ಕಪ್ಪನವರ ಹೇಳಿದರು.

ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯಲ್ಲಿ (ವಾಲ್ಮಿ) ಬುಧವಾರ ನಡೆದ ಭೂ ದಿನಾಚರಣೆಯಲ್ಲಿ ಮಾತನಾಡಿ, ಮಣ್ಣು ಮತ್ತು ನೀರಿನ ಸಂರಕ್ಷಣೆಗೆ ಪೂರಕವಾದ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಕುರಿತು ವಾಲ್ಮಿ ನಿರಂತರವಾಗಿ ತರಬೇತಿ ನೀಡುತ್ತಿದೆ’ ಎಂದರು.

‘ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದು ಅವಶ್ಯ. ಗುಜರಾತ್ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹೈನುಗಾರಿಕೆ ಮತ್ತು ಹಾಲು ಉತ್ಪಾದನಾ ಘಟಕಗಳ ಮೂಲಕ ರೈತರು ಆದಾಯ ಗಳಿಸುತ್ತಿದ್ದಾರೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ರೈತ ಗುರುಸಿದ್ದಪ್ಪ ಹುಬ್ಬಳ್ಳಿ, ವಿಷ್ಣು, ಚಾಲಕ ಬಸವರಾಜ ಮಾಟೊಳ್ಳಿ ಅವರನ್ನು ಸನ್ಮಾನಿಸಲಾಯಿತು. ವಾಲ್ಮಿ ನಿರ್ದೇಶಕ ಪ್ರೊ.ಗಿರೀಶ ಎನ್. ಮರಡ್ಡಿ ಅಧ್ಯಕ್ಷತೆ ವಹಿಸಿದ್ದರು. ನಿರ್ಮಿತಿ ಕೇಂದ್ರದ ಅಧಿಕಾರಿ ಬೈಲಪ್ಪ, ಪ್ರೊ.ಬಿ.ವೈ.ಬಂಡಿವಡ್ಡರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-24-245899064

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.