ಧಾರವಾಡ: ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ‘ಗೂಗಲ್ ಮೀಟ್’ನಲ್ಲಿ ಮಾತನಾಡಿದರು.

ಪ್ರಸ್ತುತ 15 ಗ್ರಾಮಗಳಲ್ಲಿ 17 ಖಾಸಗಿ ಕೊಳವೆಬಾವಿ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳಲ್ಲಿ ನವಿಲುತೀರ್ಥ ಜಲಾಶಯದಿಂದ 60 ಕೆರೆಗಳಿಗೆ ನೀರು ತುಂಬಿಸಲಾಗಿದೆ. ಹುಬ್ಬಳ್ಳಿ– ಧಾರವಾಡ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುಂದು ಕೊರತೆಗಳಿದ್ದರೆ ಸಹಾಯವಾಣಿ 79966 66247 ಸಂಪರ್ಕಿಸಬಹುದು ಎಂದರು.

ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 23.7 ಡಿಗ್ರಿ ಸೆಲ್ಸಿಯಸ್ ಹಾಗೂ 38.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅಧಿಕ ತಾಪಮಾನದ ಪ್ರತಿಕೂಲ ಪರಿಣಾಮ ತಡೆಗಟ್ಟಲು ಕೆಲವು ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು. ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಿಂದ ರಕ್ಷಣೆಗಾಗಿ ಕನ್ನಡಕ, ಛತ್ರಿ, ಟೋಪಿ, ಬೂಟು ಅಥವಾ ಚಪ್ಪಲಿ ಧರಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-1874956308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.