ಧಾರವಾಡ: ‘ಮಹಿಳೆಯರು ಕಾಯಕ, ದಾಸೋಹ ತತ್ವ ಅಳವಡಿಸಿಕೊಳ್ಳಗಬೇಕು. ಸ್ವಾವಲಂಬಿಗಳಾಗಬೇಕು, ಸಾಧನೆ ಮಾಡಬೇಕು’ ಎಂದು ಹೃದಯರೋಗ ತಜ್ಞೆ ವಿಜಯಲಕ್ಷ್ಮೀ ಬಾಳೆಕುಂದ್ರಿ ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ವತಿಯಿಂದ ಭಾನುವಾರ ಲಿಂಗಾಯತ ಭವನದಲ್ಲಿ ನಡೆದ ಅಕ್ಕಮಹಾದೇವಿ ಜಯಂತ್ಯುತ್ಸವ ಹಾಗೂ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಅಕ್ಕ ಮಹಾದೇವಿ ಅವರು ಸ್ತ್ರೀ ಸಮಾನತೆಗಾಗಿ ಶ್ರಮಿಸಿದರು. ಅವರ ಸಂಸ್ಕಾರ, ಸಂಸ್ಕೃತಿ, ಚಿಂತನೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ಮಹಾನಗರ ಪಾಲಿಕೆ ಉಪ ಆಯುಕ್ತೆ ಅನುರಾಧಾ ವಸ್ತ್ರದ ಮಾತನಾಡಿ, ‘ಅಕ್ಕಮಹಾದೇವಿ ಅವರು ನಮಗೆಲ್ಲರಿಗೂ ಸ್ಮರಣೀಯರು. ಅವರ ಸಂದೇಶಗಳನ್ನು ಪಾಲಿಸಬೇಕು’ ಎಂದು ತಿಳಿಸಿದರು.

ರತಿಕಾ ನೃತ್ಯ ನಿಕೇತನ ವಿದ್ಯಾರ್ಥಿನಿಯರಿಂದ ಅಕ್ಕಮಹಾದೇವಿ ವಚನಗಳ ನೃತ್ಯ ರೂಪಕ ಜರುಗಿತು. ಪ್ರೊ.ವಿ.ಸಿ.ಸವಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಮಹಾಸಭಾ ರಾಜ್ಯ ಘಟಕದ ಉಪಾಧ್ಯಕ್ಷೆ ಸವಿತಾ ಅಮರಶೆಟ್ಟಿ, ಸುವರ್ಣಾ ಬಿರಾದಾರ, ಪಾರ್ವತಿ ಹಾಲಭಾವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-24-798022424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.