ಮಂಗಳವಾರ, ಮೇ 24, 2022
30 °C

ಯೋಗೀಶಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಸೋದರ ಮಾವ ಸಿಬಿಐ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿಯನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.

ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಹಾಗೂ ಭೀಮಾ ತೀರದ ಧರ್ಮರಾಜ ಚಡಚಣ ಸಹಚರ ನಾಗಪ್ಪ ಎಂಬುವವರನ್ನು ವಿಜಯಪುರದಲ್ಲಿ ಬಂಧಿಸಿ ಇಲ್ಲಿನ ಉಪನಗರ ಠಾಣೆಗೆ ಕರೆತಂದಿದ್ದಾರೆ. 

ಈಗಾಗಲೇ ಹಲವು ಬಾರಿ ಚಂದ್ರಶೇಖರ ಇಂಡಿ ಅವರನ್ನು ವಿಚಾರಣೆಗೆ ಒಳಪಡಿಸಿದ ತಂಡ, ಇದೀಗ ಅವರೊಂದಿಗೆ ಭೀಮಾ ತೀರದ ನಾಗಪ್ಪ ಎಂಬ ವ್ಯಕ್ತಿಯನ್ನೂ ಬಂಧಿಸಿರುವುದು ಕುತೂಹಲ ಕೆರಳಿಸಿದೆ. ಕೊಲೆ ಪ್ರಕರಣದಲ್ಲಿ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದೆನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು