ಧಾರವಾಡ: ಹಾಶ್ಮಿನಗರದಲ್ಲಿ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ಮಾಡಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಅವರ ಬೆಂಬಲಿಗರು ಹಾಗೂ ಕುಟುಂಬ ಸದಸ್ಯರು ಉಪನಗರ ಠಾಣೆ ಎದುರು ಶವ ಇಟ್ಟು ಪ್ರತಿಭಟನೆ ನಡೆಸಲು ಯತ್ನಿಸಿದ ಘಟನೆ ಶನಿವಾರ ನಡೆಯಿತು.

ಶುಕ್ರವಾರ ರಾತ್ರಿ ಫೈರೋಜ್ ಮನೆಗೆ ದುಷ್ಕರ್ಮಿಗಳು ನುಗ್ಗಿ ಹತ್ಯೆ ಮಾಡಿದ್ಧಾರೆ. ಆರೋಪಿಗಳನ್ನು ಈವರೆಗೆ ಪೊಲೀಸರು ಅವರನ್ನು ಬಂಧಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು.

ಅಬ್ದುಲ್ ದೇಸಾಯಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ದೂರಿದರು.

ಎಫ್ಐಆರ್ ದಾಖಲು: ಫೈರೋಜ್ ಕೊಲೆಗೆ ಸಂಬಂಧಿಸಿದಂತೆ ಮೊಹಮ್ಮದ್ ಷಾ ಮತ್ತು ಇತರ ಆರು ಮಂದಿ ವಿರುದ್ಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.