ಗುರುವಾರ , ಜೂನ್ 30, 2022
24 °C
ಖುದ್ದು ಕೆಲಸ ಮಾಡಿದ ಅಧಿಕಾರಿ

ಕಲಘಟಗಿ: ನರೇಗಾ ಕಾರ್ಮಿಕರೊಂದಿಗೆ ಸಂವಾದ, ಬುಟ್ಟಿಯಲ್ಲಿ ಮಣ್ಣು ಹೊತ್ತ ಸಿಇಒ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಘಟಗಿ: ತಾಲ್ಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯಿತಿಯ ದೊಡ್ಡ ಕೆರೆಯಲ್ಲಿ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಸುರೇಶ ಇಟ್ನಾಳ್‌, ಕೆಲ ಹೊತ್ತು ಗುದ್ದಲಿಯಿಂದ ಮಣ್ಣು ಅಗೆದು, ಬುಟ್ಟಿಯಲ್ಲಿ ಮಣ್ಣು ಹೊತ್ತು ಕಾರ್ಮಿಕರಿಗೆ ಸ್ಫೂರ್ತಿ ತುಂಬಿದರು.

ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು ನರೇಗಾ ಪ್ರಯೋಜನಾ ಪಡೆಯಿರಿ ಎಂದರು. ಕೇಕ್‌ ಕತ್ತರಿಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು. ಆರೋಗ್ಯ ಶಿಬಿರ ಏರ್ಪಡಿಸಿ ಎಲ್ಲ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. 100 ದಿನ ಕೆಲಸ ಪೂರ್ಣಗೊಳಿಸಿದ ಕುಟುಂಬದ ಸದಸ್ಯರಿಗೆ ಸನ್ಮಾನಿಸಿದರು.

ನರೇಗಾ ಯೋಜನೆಯಡಿ ಪುರುಷ ಹಾಗೂ ಮಹಿಳೆಗೆ ಸಮಾನ ವೇತನವಿದ್ದು, ತಮ್ಮ ಗ್ರಾಮದಲ್ಲಿ 100 ದಿನಗಳ ಕಾಲ ಕೆಲಸ ಮಾಡಲು ಅವಕಾಶವಿದೆ. ಇದರ ಉಪಯೋಗ ಎಲ್ಲ ಕೂಲಿ ಕಾರ್ಮಿಕರು ಪಡೆದುಕೊಳ್ಳಬೇಕು. ಯಾರೂ ಸಹ ಗುಳೆ ಹೋಗಬಾರದು ಎಂದರು.

ತಾಲ್ಲೂಕು ಪಂಚಾಯಿತಿ ಇಒ ಶಿವಪುತ್ರಪ್ಪ ಮಠಪತಿ ಮಾತನಾಡಿ, ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವವರು ಹತ್ತಿರದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದರೆ ಕೂಡಲೇ ತ್ವರಿತವಾಗಿ ಕೆಲಸ ನೀಡಲಾಗುವದು ಎಂದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರೇಖಾ ದೊಳ್ಳಿನವರ, ತಾಲ್ಲೂಕು ನರೇಗಾ ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಪಿಡಿಒ ಬಸವರಾಜ ಕೊಳೇರ ಹಾಗೂ ಆರೋಗ್ಯ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು