ಹುಬ್ಬಳ್ಳಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಆಧಾರ್ ಕಾರ್ಡ್ ಬಳಕೆಯಾಗಿದೆ ಎಂದು ನಗರದ ಗೋಕುಲ ರಸ್ತೆಯ ಹಾಲಪ್ಪ ಸಾಬೋಜಿ ದಂಪತಿಗೆ ಮುಂಬೈ ಪೊಲೀಸ್ ಹೆಸರಲ್ಲಿ ಕರೆ ಮಾಡಿದ ವ್ಯಕ್ತಿ, ಡಿಜಿಟಲ್ ಅರೆಸ್ಟ್ ಮಾಡುತ್ತೇವೆ ಎಂದು ಬೆದರಿಸಿ ₹68.50 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.

ಮುಂಬೈನ ಕೊಲಾಬಾ ಪೊಲೀಸ್ ಠಾಣೆಯಿಂದ ವಾಟ್ಸ್ಆ್ಯಪ್ ವಿಡಿಯೊ ಕರೆ ಮಾಡುತ್ತಿರುವುದಾಗಿ, ಹಾಲಪ್ಪ ದಂಪತಿಗೆ ನಂಬಿಸಿದ್ದಾನೆ. ನಂತರ ಅವನು ಆಧಾರ್ ಕಾರ್ಡ್ಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ. ಜಾಮೀನಿನ ಮೇಲೆ ಬಿಡುಗಡೆ ಮಾಡಲು ಹಣ ನೀಡಬೇಕು ಎಂದು ತಿಳಿಸಿ, ಹಂತಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.