ಮಂಗಳವಾರ, ಸೆಪ್ಟೆಂಬರ್ 17, 2019
24 °C

ವಿಚಾರಣೆ ಮುಂದೂಡಿದ ಜಿಲ್ಲಾ ನ್ಯಾಯಾಲಯ

Published:
Updated:

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ವಿಚಾರಣೆಯನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದು, ಆ ತನಿಖೆ ಮುಗಿಯುವವರೆಗೆ ಕೊಲೆ ಪ್ರಕರಣದ ವಾದ ಮಂಡನೆ ಮುಂದೂಡಬೇಕು ಎಂದು ಯೋಗೀಶಗೌಡ ಸಹೋದರ ಗುರುನಾಥಗೌಡ ಮಾಡಿಕೊಂಡ ಮನವಿಗೆ ಸ್ಪಂದಿಸಿದ ಇಲ್ಲಿನ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ವಿಚಾರಣೆ ಮುಂದೂಡಿದೆ.

ಯೋಗೀಶಗೌಡ ಗೌಡರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಸರ್ಕಾರ ವಹಿಸಿದ್ದು, ಈ ಕುರಿತು ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ ಬಂದ ನಂತರ ಈ ಕುರಿತು ನಿರ್ಣಯ ಕೈಗೊಳ್ಳಬಹುದು ಎಂದು ನ್ಯಾಯಾಲಯ ವಿಚಾರಣೆಯನ್ನು ಸೆ.16 ಕ್ಕೆ ಮುಂದೂಡಿದೆ.

Post Comments (+)