ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯತ್ನಾಳ ವಿಚಾರಣೆ ನಂತರ ಪ್ರಿಯಾಂಕ್ ತನಿಖೆಗೆ ಹಾಜರು: ಡಿ.ಕೆ.ಶಿವಕುಮಾರ್‌

Last Updated 7 ಮೇ 2022, 19:35 IST
ಅಕ್ಷರ ಗಾತ್ರ

ಧಾರವಾಡ: ‘ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರು ಮಾಡಿರುವ ₹2,500 ಕೋಟಿ ಬೇಡಿಕೆ ಆರೋಪ ಕುರಿತಂತೆ ಮೊದಲು ವಿಚಾರಣೆ ನಡೆಸಲಿ, ನಂತರ ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಹಾಜರಾಗುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಶೇ 20ರಷ್ಟು ಕಮಿಷನ್ಪಡೆಯುವ ಸರ್ಕಾರ ಎಂದು ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ವಿಶ್ವನಾಥ್ ಆರೋಪಿಸಿದ್ದರು. ಆಗ ಅವರ ವಿಚಾರಣೆ ನಡೆಸಿತ್ತೇ?’ ಎಂದರು.

‘ಪಿಎಸ್‌ಐ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದವರಲ್ಲಿ ಕೆಲವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೊರಗೆ ತಂದಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಬಹಳಷ್ಟು ನಾಯಕರ ಹೆಸರು ಕೇಳಿಬಂದಿವೆ. ಅಷ್ಟೇ
ಅಲ್ಲದೆ ಕೆಲ ಹಿರಿಯ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆ ಇದೆ. ಗೃಹ ಸಚಿವರು ತನಿಖೆಯ ಹಾದಿ ತಪ್ಪಿಸುವ ಎಲ್ಲಾ ಸಾಧ್ಯತೆಗಳೂ ಇವೆ. ತನಿಖೆ ಪಾರದರ್ಶಕವಾಗಿ ನಡೆಯಲು ಸರ್ಕಾರ ವ್ಯವಸ್ಥೆ ಮಾಡಬೇಕು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT