ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಾಏಕಿ ಶಾಲೆ ಆರಂಭ ಬೇಡ: ಶೆಟ್ಟರ್

Last Updated 29 ಸೆಪ್ಟೆಂಬರ್ 2020, 16:18 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಶಾಲೆ ತೆರೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡವಿದೆ. ಆದರೆ, ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ, ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಇನ್ನೂ ಆತಂಕವಿದೆ. ಹಾಗಾಗಿ, ಏಕಾಏಕಿ ಶಾಲೆಗಳನ್ನು ಆರಂಭಿಸುವುದು ಬೇಡ. ಬದಲಿಗೆ, ಪ್ರಾಯೋಗಿಕವಾಗಿ ಕೆಲ ಶಾಲೆಗಳನ್ನು ಆರಂಭಿಸಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವಜಗದೀಶ ಶೆಟ್ಟರ್ಸಲಹೆ ನೀಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ಶಾಲೆಗಳ ಆರಂಭದ ಬಗ್ಗೆ ಪಾಲಕರಲ್ಲಿ ಭಿನ್ನ ಅಭಿಪ್ರಾಯಗಳಿವೆ. ಹೀಗಾಗಿ, ಮೊದಲ ಹಂತದಲ್ಲಿ ಮೂರ್ನಾಲ್ಕು ಶಾಲೆಗಳನ್ನು ಪ್ರಾಯೋಗಿಕವಾಗಿ ತೆರೆಯಲಿ. ಅದರ ಸಾಧಕ– ಬಾಧಕಗಳನ್ನು ನೋಡಿಕೊಂಡು ಬಳಿಕ, ನಿರ್ಧಾರ ಕೈಗೊಳ್ಳಬಹುದು’ ಎಂದು ತಿಳಿಸಿದರು.

ಶಾಲೆ ಆರಂಭ ಕುರಿತು ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಶಿಕ್ಷಣ ಸಚಿವರು ಬರೆದಿರುವ ಪತ್ರ ನನಗೆ ಬಂದಿಲ್ಲ. ಆ ಕುರಿತು ನಾನು ಏನನ್ನೂ ಹೇಳುವುದಿಲ್ಲ. ಇಷ್ಟು ದಿನ ನಾವು ಅಧಿವೇಶನದಲ್ಲಿ ಇದ್ದೆವು. ಅಲ್ಲಿಯೆ ಚರ್ಚಿಸಬಹುದಿತ್ತು. ಈಗ ಪತ್ರ ಬರೆದರೆ, ಏನು ಹೇಳೋದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT