ಗುರುವಾರ , ಜನವರಿ 27, 2022
28 °C

ಲಸಿಕೆ ಪಡೆಯಲು ಭಯ ಬೇಡ: ನಿಂಬಣ್ಣವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಘಟಗಿ: ಲಸಿಕೆ ಪಡೆಯಲು ಮಕ್ಕಳು ಭಯ ಪಡುವ ಅವಶ್ಯಕತೆ ಇಲ್ಲ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಲಸಿಕೆ ನೀಡುತ್ತಿದೆ ಎಂದು ಶಾಸಕ ಸಿ.ಎಂ ನಿಂಬಣ್ಣವರ ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಮೂರನೇ ಅಲೆಯ ಮುನ್ಸೂಚನೆ ಇರುವುದರಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕು. ಸರ್ಕಾರ ನೀಡುತ್ತಿರುವ ಲಸಿಕೆ ಪಡೆದರೆ ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ, ತಾಲ್ಲೂಕ ಆರೋಗ್ಯ ವೈದ್ಯಾಧಿಕಾರಿ ಡಾ.ಬಸವರಾಜ ಬಾಸೂರ, ಮಧುಸೂದನ ಗಿರಿಜಾದೇವಿ, ಎಂ.ಆರ್.ಕುಲಕರ್ಣಿ, ಬಾನುಮತಿ ಅಡಗಲ್ಲ, ಜಿ.ಎನ್.ಭಾಗವತ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.