ಸೋಮವಾರ, ಜನವರಿ 17, 2022
20 °C

‘ಲಸಿಕೆ ಪಡೆಯಲು ಹಿಂಜರಿಕೆ ಬೇಡ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಳ್ನಾವರ: ‘ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ನೀಡುವ ಕೋವಿಡ್ ಲಸಿಕೆ ಪಡೆಯಲು ಭಯ, ಹಿಂಜರಿಕೆ ಬೇಡ. ಧೈರ್ಯದಿಂದ ಲಸಿಕೆ ಪಡೆಯಬೇಕು’ ಎಂದು ಉಪ ವಿಬಾಗಾಧಿಕಾರಿ ಡಾ. ಗೋಪಾಲಕೃಷ್ಣ ಹೇಳಿದರು.

ತಹಶೀಲ್ದಾರ್ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಪಟ್ಟಣ ಪಂಚಾಯ್ತಿ ಸಹಯೋಗದಲ್ಲಿ ಸೋಮವಾರ ಇಲ್ಲಿನ ದಿ ನ್ಯೂ ಇಂಗ್ಲಿಷ್ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಎಸ್‌ಎಸ್‌ಟಿ ಬಾಲಿಕಾ ಪ್ರೌಢಶಾಲೆ ಆವರಣದಲ್ಲಿ ನಡೆದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಹಶೀಲ್ದಾರ್ ಅಮರೇಶ ಪಮಾರ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಾ ರವಳಪ್ಪನವರ, ಛಗನಲಾಲ ಪಟೇಲ, ರಮೇಶ ಕುನ್ನೂರಕರ, ತಮೀಮ ತೇರಗಾಂವ, ಪ್ರಾಚಾರ್ಯ ಎಂ.ಬಿ. ಕೊಟೆನ್ನವರ, ಕೆ. ಮಧುಸೂಧನ, ಡಾ. ಸವಿತಾ, ಮಾಲಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.